ಬೆಂ.ಗ್ರಾ.ಜಿಲ್ಲೆ: ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ಸಂಬಂಧ ದೇವನಹಳ್ಳಿ ಪಟ್ಟಣದ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಸ್ಥಾಪಿಸಲಾದ ಮತ ಎಣಿಕೆ ಕೇಂದ್ರದಲ್ಲಿ ಮತಪೆಟ್ಟಿಗೆಗಳನ್ನು ಇರಿಸಲಾಗಿದ್ದ, ಸ್ಟ್ರಾಂಗ್ ರೂಂ ತೆರೆಯಲಾಯಿತು.
ಮತ ಎಣಿಕೆ ದಿನವಾದ ಇಂದು 17-ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾ ವೀಕ್ಷಕ ಶಿವಯೋಗಿ ಕಳಸದ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಕೆ.ಶ್ರೀನಿವಾಸ್, ವಿವಿಧ ಪಕ್ಷಗಳ ಏಜೆಂಟರುಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….