ಬೆಂ.ಗ್ರಾ.ಜಿಲ್ಲೆ: ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ಸಂಬಂಧ ದೇವನಹಳ್ಳಿ ಪಟ್ಟಣದ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಸ್ಥಾಪಿಸಲಾದ ಮತ ಎಣಿಕೆ ಕೇಂದ್ರದಲ್ಲಿ ನಡೆಸಲಾಗಿತ್ತಿರುವ ಮತ ಎಣಿಕೆ ಕಾರ್ಯ ವಿಳಂಬವಾಗಿ ಆರಂಭವಾಗಿದೆ.
ಕನಕಪುರ ತಾಲೂಕಿನ ಒಂದು ಗ್ರಾಮಪಂಚಾಯಿತಿಯಲ್ಲಿ ಮತ ಚಲಾವಣೆ ವೇಳೆ ಮತದಾರರು ಮತವನ್ನು ಬಹಿರಂಗಪಡಿಸಿದ ಹಿನ್ನಲೆಯಲ್ಲಿ. ವಿಡಿಯೋ ಮೂಲಕ ಗಮನಿಸಿ ಮತಗಳನ್ನು ಸಿಂಧು, ಅಸಿಂಧು ಎಂದು ತೀರ್ಮಾನಿಸಿದ್ದು, ವಿಳಂಬಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಬಂಡಲ್ ಮಾಡಲಾಗುತ್ತಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….