ದೊಡ್ಡಬಳ್ಳಾಪುರ: ದೆಹಲಿ ಮತ್ತು ಕರ್ನಾಟಕ ನಡುವೆ ಸಂಚರಿಸುವ ಕೆಕೆ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇಡಲಾಗಿದೆ ಎಂದು ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಬಾಂಬ್ ನಿಷ್ಕ್ರಿಯ ದಳ, ರೈಲ್ವೆ ಹಾಗೂ ಪೊಲೀಸ್ ಅಧಿಕಾರಿಗಳು ರೈಲಿನಲ್ಲಿ ತಪಾಸಣೆ ನಡೆಸಿ ಹುಸಿ ಕರೆಯಂದು ಪತ್ತೆ ಹಚ್ಚಿದ್ದಾರೆ.
ಹುಸಿ ಕರೆ ಮಾಡಿದ್ದ ವ್ಯಕ್ತಿಯನ್ನು ರಾಯಚೂರಿನ ವಾಡಿಯಲ್ಲಿ ಬಂಧಿಸಲಾಗಿದೆ ಎಂದು ದೊಡ್ಡಬಳ್ಳಾಪುರ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ತಿಳಿಸಿದ್ದಾರೆ.
ಆಂಧ್ರಪ್ರದೇಶ ದಾಟಿದ ನಂತರ ಈ ರೈಲು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರು ತಲುಪುತ್ತದೆ.
ರೈಲು ನಿಲ್ಲಿಸಿ ತಪಾಸಣೆ ನಡೆಸಿದರೆ ಜನರು ಭಯಗೊಳ್ಳುವರು. ಈ ಮೇರೆಗೆ ಹಿಂದೂಪುರಕ್ಕೆ ತೆರಳಿ ಅಲ್ಲಿಂದಲೇ ಚಲಿಸುತ್ತಿರುವ ರೈಲಿನಲ್ಲಿ ತಪಾಸಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….