ಬೆಂಗಳೂರು: ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾದ ಸುಟ್ಟ ಗಾಯಗಳಿಂದ ರಕ್ಷಿಸಲ್ಪಟ್ಟು, ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕಮಾಂಡರ್ ಕ್ಯಾ.ವರುಣ್ ಸಿಂಗ್ ಬುಧವಾರ(ಡಿ.15) ಕೊನೆಯುಸಿರೆಳೆದಿದ್ದಾರೆ.
ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ಗ್ರೂಪ್ ಕಮಾಂಡರ್ ಕ್ಯಾ.ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿರುವುದಾಗಿ ವರದಿ ತಿಳಿಸಿದೆ.
ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಇತರ 12 ಮಂದಿ ತಮಿಳುನಾಡಿನಲ್ಲಿ ಸಂಭವಿಸಿದ್ದ ಭೀಕರ ದುರಂತದಲ್ಲಿ ವಿಧಿವಶರಾಗಿದ್ದು, ದುರಂತದಲ್ಲಿ ಬದುಕುಳಿದ ಏಕೈಕ ಗಾಯಾಳು ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….