ಕೋಲಾರ: ಪಾರ್ಶ್ವವಾಯುಗೆ ತುತ್ತಾಗಿ, ಇಲ್ಲಿನ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ (96) ಸ್ಥಿತಿ ಗಂಭಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಮನೆಯಲ್ಲಿದ್ದ ಅವರು ಪಾರ್ಶ್ವವಾಯುಗೆ ತುತ್ತಾಗಿದ್ದು, ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು ಈ ಹಿನ್ನಲೆಯಲ್ಲಿ ಅವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.
ಆದರೆ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಕುಟುಂಬಸ್ಥರು ಆಸ್ಪತ್ರೆಗೆ ತೆರಳುತ್ತಿರುವುದಾಗಿ ಜಾಲಪ್ಪರ ಮೊಮ್ಮಗ ಅರವಿಂದ್ ಹರಿತಲೇಖನಿಗೆ ತಿಳಿಸಿದ್ದಾರೆ.
ಮತ್ತೊಂದೆಡೆ ಅವರ ನಿಧನದ ಕುರಿತು ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಂತಾಪ ಸೂಚಿಸಿ ಫೇಸ್‌ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ.
ಮತ್ತೊಂದೆಡೆ ಜಾಲಪ್ಪರ ಸ್ವಗ್ರಾಮ ತೂಬಗೆರೆಯ ಮನೆಯ ಬಳಿ ಹಾಗೂ ನಗರದ ಜಾಲಪ್ಪ ಕಾಲೇಜಿನಲ್ಲಿ ಸಿದ್ದತೆಗಳು ಭರದಿಂದ ಸಾಗಿದ್ದು, ಇಂದು ಜಾಲಪ್ಪ ಅವರು ಇಹಲೋಕವನ್ನು ತ್ಯಜಿಸಲಿದ್ದಾರೆ ಎಂಬ ಆತಂಕದ ಮಾತುಗಳು ದಟ್ಟವಾಗಿ ಕೇಳಿಬರುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….