Site icon ಹರಿತಲೇಖನಿ

ಡಿಸೆಂಬರ್ 24 ರಂದು ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ: ವಿಜಯಾ.ಈ.ರವಿಕುಮಾರ್

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ: ಹೊಸಕೋಟೆ ತಾಲೂಕಿನ ದೇವನಗೊಂದಿ ಗ್ರಾಮದ ಬಳಿ ಇರುವ ಇಂಡೇನ್ ಕಂಪೆನಿಯ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಕಾರ್ಖಾನೆಯಲ್ಲಿ ಡಿಸೆಂಬರ್ 24 ರಂದು ವಿಪತ್ತು ನಿರ್ವಹಣೆ ಕುರಿತ ಅಣುಕು ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್ ಅವರು ತಿಳಿಸಿದರು.

Aravind, BLN Swamy, Lingapura

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿಪತ್ತು ನಿರ್ವಹಣೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ಅವರು ಮಾತನಾಡಿದರು.

ಮಾನವ ನಿರ್ಮಿತ ವಿಪತ್ತುಗಳು ಕೈಗಾರಿಕೆಗಳು, ಕಾರ್ಖಾನೆಗಳಲ್ಲಿ ಹೆಚ್ಚಾಗಿ ಸಂಭವಿಸಲಿದೆ. ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದೇವಗೊಂದಿ ಗ್ರಾಮದ ಬಳಿ ಐಓಸಿಎಲ್‌ನ ಪೆಟ್ರೋಲಿಯಂ ಹಾಗೂ ಎಲ್‌ಪಿಜಿ ಕಾರ್ಖಾನೆಯಿದ್ದು ನೂರಾರು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Aravind, BLN Swamy, Lingapura

ಪೆಟ್ರೋಲಿಯಂ ಹಾಗೂ ಎಲ್‌ಪಿಜಿ ಸಂಗ್ರಹಣಾ ಘಟಕಗಳಲ್ಲಿ ಬೆಂಕಿ ಅಥವಾ ಇನ್ನಿತರ ಅವಘಡ ಸಂಭವಿಸಿದರೆ ಅಂತಹ ತುರ್ತು ಪರಿಸ್ಥಿತಿಯನ್ನು ಹೇಗೆ ನಿಭಾಹಿಸಬೇಕೆಂದು ಕಾರ್ಖಾನೆ ಸಿಬ್ಬಂದಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಅರಿವು ಮೂಡಿಸಲು ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆರೋಗ್ಯ, ಪೊಲೀಸ್, ಅಗ್ನಿ ಶಾಮಕ, ಕಂದಾಯ, ಜಿಲ್ಲಾ ಪಂಚಾಯಿತಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಬೇಕೆಂದು ತಿಳಿಸಿದರು.

ಕಾರ್ಖಾನೆ ಮತ್ತು ಬ್ಲಾಯರ್ ಇಲಾಖೆಯ ಉಪ ನಿರ್ದೇಶಕರಾದ ನರಸಿಂಹಮೂರ್ತಿ, ಐಓಸಿಲ್ ಘಟಕದ ಜನರಲ್ ಮ್ಯಾನೇಜರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version