ದೊಡ್ಡಬಳ್ಳಾಪುರ: ರಾಜ್ಯದ ಹಿಂದುಳಿದ ವರ್ಗಗಳ ನೇತಾರ, ಹಿರಿಯ ಕಾಂಗ್ರೆಸ್ಸಿಗ, ಕೇಂದ್ರದ ಮಾಜಿ ಮಂತ್ರಿ ಆರ್.ಎಲ್. ಜಾಲಪ್ಪ(96) ನಿಧನರಾಗಿರುವುದು ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಖಾಸಗಿ ಶಾಲೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಎ.ಸುಬ್ರಮಣ್ಯ, ಕಾರ್ಯದರ್ಶಿ ಎಸ್.ಆರ್.ರಮೇಶ್ ಹಾಗೂ ಒಕ್ಕೂಟದ ಸದಸ್ಯರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿದ ಖಾಸಗಿ ಶಾಲೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಎ.ಸುಬ್ರಮಣ್ಯ, ದೊಡ್ಡಬಳ್ಳಾಪುರ ತಾಲೂಕಿನವರಾದ ಜಾಲಪ್ಪ ಅವರು ವಿವಿಧ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಸಿಬಿಎಸ್ಸಿ ಶಾಲೆಗಳು ಸೇರಿದಂತೆ ಅನೇಕ ಶಾಲೆಗಳ ಮೂಲಕ ಶೈಕ್ಷಣಿಕವಾಗಿ ಸೇವೆ ಸಲ್ಲಿಸಿದ್ದಾರೆ.
ಬಡಮಕ್ಕಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಜಾಲಪ್ಪ ಅವರು ಬಡ ಮಕ್ಕಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ನೀಡುತ್ತಿದ್ದರು. ಬಹುಮುಖ್ಯವಾಗಿ ಮಕ್ಕಳಿಗೆ ಮಧ್ಯಾಹ್ನದ ವೇಳೆ ಊಟ ನೀಡುವ ಮೂಲಕ ಶೈಕ್ಷಣಿಕ ರಂಗಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.
ಜಾಲಪ್ಪ ಅವರ ಅಗಲಿಕೆ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….