ದೊಡ್ಡಬಳ್ಳಾಪುರ: ಶುಕ್ರವಾರ ರಾತ್ರಿ ನಿಧನರಾದ ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಪಾರ್ಥಿವ ಶರೀರಕ್ಕೆ ಸಂಸದ ಬಿ.ಎನ್.ಬಚ್ಚೆಗೌಡ ಮತ್ತು ಶಾಸಕ ಜಿ.ಟಿ,ದೇವೇಗೌಡ ಅಂತಿಮ ನಮನ ಸಲ್ಲಿಸಿದರು.
ಇಂದು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಿ ಅವರು ಅಂತಿಮ ನಮನ ಸಲ್ಲಿಸಿ, ಜಾಲಪ್ಪರ ಪುತ್ರ ಜೆ.ನರಸಿಂಹಸ್ವಾಮಿ ಮತ್ತು ಮೊಮ್ಮಗ ಅರವಿಂದ್ ಅವರಿಗೆ ಧೈರ್ಯ ಹೇಳಿದರು.
ಪ್ರಸ್ತುತ ಆರ್.ಎಲ್.ಜಾಲಪ್ಪ ಅವರ ಪಾರ್ಥಿವ ಶರೀರವನ್ನು ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾ ವಿದ್ಯಾಲಯದಲ್ಲಿನ ಜಾಲಪ್ಪ ಕಲಾ ಮಂದಿರದಲ್ಲಿ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ದರ್ಶನಕ್ಕೆ ಸಿದ್ದತೆ ನಡೆಸಲಾಗುತ್ತಿದೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಶಾಸಕ ಕುಮಾರ್ ಬಂಗಾರಪ್ಪ ಸೇರಿದಂತೆ ಅನೇಕ ಗಣ್ಯರು ಆಗಮಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….