ಮೇಷ: ಈ ರಾಶಿಯವರಿಗೆ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಕೋರ್ಟ್ನಲ್ಲಿ ಇರುವ ಪ್ರಕರಣ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.
ವೃಷಭ: ಈ ರಾಶಿಯವರು ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯವಾಗುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.
ಮಿಥುನ: ಈ ರಾಶಿಯವರಿಗೆ ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯಲಿದೆ. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚು ಬರಬಹುದು.
ಕಟಕ: ಈ ರಾಶಿಯವರಿಗೆ ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು.
ಸಿಂಹ: ಈ ರಾಶಿಯವರಿಗೆ ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ.
ಕನ್ಯಾ: ಈ ರಾಶಿಯ ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆ ಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು.
ತುಲಾ: ಈ ರಾಶಿಯವರಿಗೆ ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವುದು.
ವೃಶ್ಚಿಕ: ಈ ರಾಶಿಯವರಿಗೆ ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ.
ಧನಸ್ಸು: ಈ ರಾಶಿಯವರಿಗೆ ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು,ಎಲ್ಲಾ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.
ಮಕರ: ಈ ರಾಶಿಯವರಿಗೆ ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲ(ನೀರು)ದಾನ ಮಾಡಿರಿ.
ಕುಂಭ: ಈ ರಾಶಿಯವರು ಇಂದು ಯಾವುದೇ ಹೊಸ ಯೋಜನೆಗಳನ್ನು ಕೈಗೆತ್ತುಕೊಳ್ಳಬೇಡಿ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ.
ಮೀನ: ಈ ರಾಶಿಯವರಿಗೆ ಏಕಾಂಗಿತನದ ಬೇಸರ ಪರಿಸರದಿಂದ ಹೊರ ಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನಃ ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು.
ತಿಥಿ: ಪೌರ್ಣಮಿ
ನಕ್ಷತ್ರ: ರೋಹಿಣಿ ನಕ್ಷತ್ರ
ರಾಹುಕಾಲ: 09:28 ರಿಂದ 10:54
ಗುಳಿಕಕಾಲ: 06:37 ರಿಂದ 08:02
ಯಮಗಂಡಕಾಲ: 01:45 ರಿಂದ 03:11
ಈ ದಿನದ ವಿಶೇಷ: ದತ್ತಾತ್ರೇಯ ಜಯಂತಿ
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….