Site icon ಹರಿತಲೇಖನಿ

ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊಣೆ: ಬಸವರಾಜ ಬೊಮ್ಮಾಯಿ

Channel Gowda
Hukukudi trust

ಬೆಳಗಾವಿ: ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Aravind, BLN Swamy, Lingapura

ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ನಡೆದ  ಪ್ರಕರಣದ ಬಗ್ಗೆ ಮಾತನಾಡಿದರು. 

ಕೆಲವರು ಕಾನೂನು ಬಾಹಿರವಾಗಿ ಪುಂಡಾಟಿಕೆ ಮಾಡಿದ್ದಾರೆ. ಕರ್ನಾಟಕದ ಕಾನೂನು ಸುವ್ಯವಸ್ಥೆ ನಮ್ಮ ಜವಾಬ್ದಾರಿ. ಮಹಾರಾಷ್ಟ್ರದಲ್ಲಿ  ಕಾನೂನು ಸುವ್ಯವಸ್ತೆ ಕಾಪಾಡಿಕೊಳ್ಳುವುದು ಅಲ್ಲಿನ ಸರ್ಕಾರದ ಜವಾಬ್ದಾರಿ.  ಅಲ್ಲಿನ ಕನ್ನಡಿಗರ ರಕ್ಷಣೆ ಹಾಗೂ ಬಸ್ಸು ಇತ್ಯಾದಿ ವಾಹನಗಳ ರಕ್ಷಣೆ ಮಾಡಲು ನಮ್ಮ ಪೋಲಿಸ್ ವiಹಾ ನಿರ್ದೇಶಕರು ಅಲ್ಲಿನ ಪೊಲೀಸ್ ಮಹಾನಿರ್ದೇಶಕರೊಂದಿಗೆ  ಹಾಗೂ ಗೃಹ ಸಚಿವರು ಮಹಾರಾಷ್ಟ್ರದ ಗೃಹ ಸಚಿವರು ರೊಂದಿಗೆ  ಮಾತನಾಡಲಿದ್ದಾರೆ. ಮೊದಲು ಅಧಿಕಾರಿಗಳು ಮಾತನಾಡುತ್ತಾರೆ. ನಂತರ ಅಗತ್ಯ ಬಿದ್ದರೆ ಅಲ್ಲಿನ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದರು.

Aravind, BLN Swamy, Lingapura

ಶಿವಸೇನೆಯ ಸಂಜಯ್ ರಾವತ್ ಅವರು  ಮರಾಠಿಗಳು ಒಂದಾಗುವಂತೆ ಕರೆ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಜವಾಬ್ದಾರಿ ಇರುವ  ಜನರು ಯಾರನ್ನೂ ಯಾವ ಸಮಯದಲ್ಲಿಯೂ ಪ್ರಚೋದನೆ ಮಾಡಬಾರದು. ಛತ್ರಪತಿ ಶಿವಾಜಿ, ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ, ದೇಶವನ್ನು ಒಗ್ಗೂಡಿಸಿದವರು. ಅವರ ಹೆಸರಿನಲ್ಲಿ ನಾವು  ಜಗಳವಾಡಿಕೊಂಡು ಒಡಕು ಮೂಡಿಸಿದರೆ ಅದು ಅವರ ಹೋರಾಟಕ್ಕೆ ಅನ್ಯಾಯವೆಸಗಿದಂತಾಗುತ್ತದೆ. ಕಾನೂನನ್ನ ಕೈಗೆ ತೆಗೆದುಕೊಂಡು ಯಾರನ್ನೂ ಇಂತಹ ಕೆಲಸಗಳನ್ನು ಮಾಡಲು ಕುಮ್ಮಕ್ಕು ನೀಡಬಾರದು ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version