Site icon ಹರಿತಲೇಖನಿ

ದಿನ ಭವಿಷ್ಯ: ಸೋಮವಾರ, ಡಿಸೆಂಬರ್ 20, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರ ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ

Channel Gowda
Hukukudi trust

ಮೇಷ: ಈ ರಾಶಿಯವರಿಗೆ ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.

Aravind, BLN Swamy, Lingapura

ವೃಷಭ: ಈ ರಾಶಿಯವರಿಗೆ ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಸಬೇಕಾಗುವುದು. ಗೃಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು.

ಮಿಥುನ: ಈ ರಾಶಿಯವರ ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.ಪರಸ್ಪರ ದೋಷಾರೋಪ ಬೇಡ.ಮಿತ್ರರ ಸಹಾಯ ದೊರೆಯುವುದು.

Aravind, BLN Swamy, Lingapura

ಕಟಕ: ಈ ರಾಶಿಯವರಿಗೆ ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.

ಸಿಂಹ: ಈ ರಾಶಿಯವರಿಗೆ ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ.

ಕನ್ಯಾ: ಈ ರಾಶಿಯವರು ವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುತ್ತೀರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಮಂಗಳ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವುದು.

ತುಲಾ: ಈ ರಾಶಿಯವರಿಗೆ ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವುದು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.

ವೃಶ್ಚಿಕ: ಈ ರಾಶಿಯವರಿಗೆ ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅವಮಾನಕ್ಕೆ ಕಾರಣವಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶಸ್ಸು ಕಾಣುವಿರಿ.

ಧನಸ್ಸು: ಈ ರಾಶಿಯವರಿಗೆ ಧನಮೂಲಗಳು ಹೆಚ್ಚಾಗುವುದು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು.

ಮಕರ: ಈ ರಾಶಿಯವರಿಗೆ ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವ-ಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.

ಕುಂಭ: ಈ ರಾಶಿಯವರು ಇಂದು ಯಾವುದಕ್ಕೂ ವ್ಯವಹಾರದಲ್ಲಿ ಹೂಡಿಕೆ ಮಾಡಬೇಡಿ.ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವುದು. ಅಪೇಕ್ಷಿತ ಧನಸಹಾಯ ದೊರೆಯುವುದು.

ಮೀನ: ಈ ರಾಶಿಯವರು ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ ಇವರದ್ದಾಗಿರುತ್ತದೆ. ಇದ್ದಕ್ಕಿದ್ದoತೆ ಶುಭಸುದ್ದಿ ಬರುತ್ತದೆ. ಮನೆಯ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ .

ಪಕ್ಷ: ಕೃಷ್ಣ ಪಕ್ಷ 

ತಿಥಿ: ಪ್ರತಿಪತ್ 

ನಕ್ಷತ್ರ:  ಆರಿದ್ರ ನಕ್ಷತ್ರ

ರಾಹುಕಾಲ: 08:03 ರಿಂದ 09:29

ಗುಳಿಕಕಾಲ: 01:46 ರಿಂದ 03:12

ಯಮಗಂಡಕಾಲ: 10:55 ರಿಂದ 12:21

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version