ಬೆಳಗಾವಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ವಿರೋಧಿಸಿ ಮತ್ತು ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಬಂದ್ ಮಾಡುವ ಕುರಿತಂತೆ ಬುಧವಾರ ನಿರ್ಧರಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.
ಹಿರೇಬಾಗೆವಾಡಿಯಲ್ಲಿ ಮಾತನಾಡಿದ ಅವರು, ಬುಧವಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಿ ಕರ್ನಾಟಕ ಬಂದ್ ಮಾಡುವ ಕುರಿತಂತೆ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇಂದು ಬೆಳಗಾವಿ ಕೃತ್ಯ ಖಂಡಿಸಿ ಕನ್ನಡ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ಬೆಳಗಾವಿ ಚಲೋ ಹಮ್ಮಿಕೊಂಡಿದ್ದು, ಹಿರೇಬಾಗೇವಾಡಿಯಲ್ಲಿ ಪೊಲೀಸರು ಕನ್ನಡ ಪರ ಹೋರಾಟಗಾರರನ್ನು ತಡೆದು ವಶಕ್ಕೆ ಪಡೆದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….