Site icon ಹರಿತಲೇಖನಿ

ಕ್ಷಯ ಮುಕ್ತ ರಾಜ್ಯಕ್ಕೆ ಪೂರಕವಾಗಿ ಕ್ಷಯ ಮುಕ್ತ ಗ್ರಾಮ ಪಂಚಾಯಿತಿಗೆ ಚಾಲನೆ: ಡಾ.ಎಸ್.ಅನಿಲ್

Channel Gowda
Hukukudi trust

ದೊಡ್ಡಬಳ್ಳಾಪುರ: ದಿನೇ ದಿನೇ ಕ್ಷಯ ರೋಗಿಗಳ ಸಂಖ್ಯೆ ಇಳಿಮುಖವಾಗಿಸಲು ಹಾಗೂ 2025ರ ವೇಳೆಗೆ ರಾಜ್ಯವನ್ನು ಕ್ಷಯ‌ ಮುಕ್ತವನ್ನಾಗಿಸಲು, ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದ್ದು, ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯಡಿ ಆರಂಭಿಕವಾಗಿ 500 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ, ಜಾಗೃತಿ ಮೂಡಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯ ರೋಗ ವಿಭಾಗದ ರಾಜ್ಯ ಉಪ ನಿರ್ದೇಶಕರಾದ ಡಾ.ಎಸ್.ಅನಿಲ್ ತಿಳಿಸಿದರು.

Aravind, BLN Swamy, Lingapura

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಡ ಕ್ಷಯ ರೋಗಿಗಳಿಗೆ  ದಾನಿಗಳಿಂದ ನೀಡಲಾದ ಕಿಟ್‍ಗಳ ವಿತರಣಾ ಕಾರ್ಯಕ್ರಮ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಿಎಂಟಿಪಿಟಿ ಕಾರ್ಯಕ್ರಮದಡಿಯಲ್ಲಿ  ಕ್ಷಯ ರೋಗ ಸೋಂಕಿಗೆ ಚಿಕಿತ್ಸೆ ನೀಡುವ ಹೊಸ ವಿಧಾನವನ್ನು 17 ಜಿಲ್ಲೆಗಳಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಕಾರ್ಯಕ್ರಮದಡಿಯಲ್ಲಿ ವಿವಿಧ ಕಂಪನಿಗಳು ಹಾಗೂ ಸ್ವಯಂ ಸೇವಾ ಸಂಘಗಳ ಮೂಲಕ 2000 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮ ಅನುಷ್ಟಾನಗೊಳಿಸಲಾಗುತ್ತಿದೆ. 

Aravind, BLN Swamy, Lingapura

ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಗ್ರಾಮೀಣರಲ್ಲಿ ಕ್ಷಯ ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿ ಕ್ಷಯ ರೋಗದ ಸಾಧಕ ಬಾಧಕಗಳ ಕುರಿತಾಗಿ ಚರ್ಚೆಯಾಗಬೇಕು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗುಣಮುಖರಾದ ಕ್ಷಯ ರೋಗಿಗಳು ಹಾಗೂ ದಾನಿಗಳಿಂದ ಕ್ಷಯ ರೋಗಿಗಳಿಗೆ ಪೌಷ್ಟಿಕಾಂಶ ಕಿಟ್‍ಗಳನ್ನು ವಿತರಿಸಲಾಗುತ್ತಿರುವುದು ದೇಶದಲ್ಲಿಯೇ ಇದು ವಿನೂತನ ಯೋಜನೆಯಾಗಿದೆ. ಕ್ಷಯ ರೋಗ ಸೇರಿದಂತೆ ವಿವಿಧ ರೋಗಗಳಿಗೆ ಸರ್ಕಾರ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿದೆ. ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟು ಸತತ ಕೆಮ್ಮು, ಜ್ವರ ಸಂಜೆ ವೇಳೆ ಹೆಚ್ಚಳ, ತೂಕ ಕಡಿಮೆಯಾಗುವುದು ಪ್ರಮುಖ ಲಕ್ಷಣವಾಗಿದೆ. ಆದರೆ ರೋಗಿಗಳು ವೈದ್ಯರ ಸಲಹೆಗಳನ್ನು ತಪ್ಪದೇ ಪಾಲಿಸಬೇಕು. ಔಷ ಅಡ್ಡ ಪರಿಣಾಮಗಳಾದರೆ ವೈದ್ಯರ ಗಮನಕ್ಕೆ ತರಬೇಕಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಟಿಬಿ ನಿರ್ಮೂಲನಾ ರಾಯಭಾರಿ  ಹುಲಿಕಲ್ ನಟರಾಜ್ ಮಾತನಾಡಿ, ಜಿಲ್ಲೆಯಲ್ಲಿ ಕ್ಷಯ ರೋಗ ನಿಯಂತ್ರಣಕ್ಕಾಗಿ, ವೈದ್ಯರೊಂದಿಗೆ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರಗಳನ್ನು ತಲುಪಿಸಲು ಹಾಗೂ  ಚಿಕಿತ್ಸೆ ನೀಡಲು ನಮ್ಮ ತಂಡ ಸಿದ್ದವಾಗಿದ್ದು, ಲಯನ್ಸ್ ಕ್ಲಬ್ ನಿಂದ ಪ್ರಚಾರದ ಪೋಸ್ಟರ್ ಗಳನ್ನು ಸಿದ್ದಗೊಳಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಕಾರಿ ಡಾ.ನಾಗೇಶ್, ಜಿಲ್ಲಾ ಮಲೇರಿಯಾ ನಿಯಂತ್ರಣ ಅಕಾರಿ ಡಾ.ಧರ್ಮೇಂದ್ರ, ಸರ್ಕಾರಿ ನೌಕರರ ಸಂಘದ ತಾಲೂಕು ಜಂಟಿ ಕಾರ್ಯದರ್ಶಿ ಶ್ರೀನಿವಾಸ್, ಫಾರ್ಮಸಿಸ್ಟ್ ಅಧಿಕಾರಿ ಆರತಿ ಬಸವರಾಜು, ಕ್ಷಯ ರೋಗ ಸಂದರ್ಶಕರಾದ ಆನಂದ್, ಸಿದ್ದರಾಜ್, ಯುವರಾಜ್, ಪ್ರಭಾಕರ್, ದಾನಿಗಳಾದ ಜನಾರ್ಧನ್, ಸೇರಿದಂತೆ ಆರೋಗ್ಯ ಇಲಾಖೆಯ ಹಾಗೂ ಕ್ಷಯ ರೋಗ ನಿರ್ಮೂಲನಾ ಘಟಕದ ಸಿಬ್ಬಂದಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version