![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆ ಆದಕಾರಣ ಕನ್ನಡದ ಪರಿಪೂರ್ಣವಾದ ಕಲಿಕೆ ಅವಶ್ಯಕ. ವ್ಯವಹಾರಿಕವಾಗಿ ಪ್ರಸ್ತುತ ಸ್ಪರ್ಧಾ ಜಗತ್ತಿನಲ್ಲಿ ಇಂಗ್ಲಿಷ್ ಅನಿವಾರ್ಯತೆ ಇದ್ದು ಅದರ ಕಲಿಕೆಗೆ ಪೂರಕವಾಗಿ ಇಲಾಖೆಯು ಸಹ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ ಹೇಳಿದರು.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸಂಚಲನ ಸಹಯೋಗದೊಂದಿಗೆ ಉಚಿತವಾಗಿ ಒಂದು ತಿಂಗಳ ಕಾಲ ನಡೆಯುವ ಸ್ಪೋಕನ್ ಇಂಗ್ಲಿಷ್ ಕೌಶಲ್ಯ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಭಾರತಿಶ್ಯಾಮರಾಜ್ ಮಾತನಾಡಿ, ಮಹಿಳೆಯರ ಸ್ವಾವಲಂಬನೆಯ ಬದುಕಿಗಾಗಿ ಕೆಲವು ಕಲಿಕೆಗಳು ಅನಿವಾರ್ಯವಾಗಿವೆ. ಪದವಿ ವಿದ್ಯಾರ್ಥಿನಿಯರಿಗೆ ಸ್ಪೋಕನ್ ಇಂಗ್ಲಿಷ್ ಕಲಿಕೆ ಅತಿಮುಖ್ಯವಾಗಿದೆ ಎಂದರು.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಯುವ ಸಂಚಲನ ಅಧ್ಯಕ್ಷ ಚಿದಾನಂದ್ ಮಾತನಾಡಿ, ಯುವ ಸಂಚಲನ ತಂಡವು ಆರು ವರ್ಷಗಳಿಂದ ನಿರಂತರವಾಗಿ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿಯನ್ನು ತಾಲ್ಲೂಕಿನಲ್ಲಿ ಹಮ್ಮಿಕೊಳ್ಳುತ್ತಿದ್ದು ಪ್ರಸ್ತುತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ ಅವರ ಬೆಂಬಲದಿಂದ ತರಗತಿಗಳು ಮತ್ತಷ್ಟು ಯಶಸ್ವಿಯಾಗಿ ನಡೆಯಲಿವೆ ಎಂದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಪ್ರೊ.ಎಸ್.ವಿ.ದಿವ್ಯಶ್ರೀ, ಅರ್ಥಶಾಸ್ತ್ರ ವಿಭಾಗದ ಪ್ರೊ.ಜಿ.ರಂಗನಾಥ್, ದೈಹಿಕ ಶಿಕ್ಷಣ ವಿಭಾಗದ ಪ್ರೊ.ಪ್ರಸನ್ನಕುಮಾರ್,ಇಂಗ್ಲಿಷ್ ವಿಭಾಗದ ಪ್ರೊ.ನಂಜಪ್ಪ ಹಾಗೂ ಯುವ ಸಂಚಲನ ತಂಡದ ಸದಸ್ಯ ದಿವಾಕರ್ನಾಗ್, ಹನುಮಂತರಾಜು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….