ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಸೋಮವಾರ ನಡೆದ ಸಚಿವ ಸಂಪುಟ ಸಭೆ ಮತಾಂತರ ನಿಷೇಧ ಮಸೂದೆ ಮಂಡನೆಗೆ ಒಪ್ಪಿಗೆ ನೀಡಿದೆ.
ಸೋಮವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖವಾಗಿ ಮತಾಂತರ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲು ಒಪ್ಪಿಗೆ ನೀಡಲಾಗಿದೆ.
ಮತಾಂತರ ನಿಷೇಧ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಅದನ್ನು ಇಂದು ವಿಧಾನಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ.
ಈ ವಿಧೇಯಕ ಮಂಡನೆಗೆ ಪ್ರತಿ ಪಕ್ಷ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಬಿಜೆಪಿ ಮಾತ್ರ ಶತಾಯ ಗತಾಯ ಈ ವಿಧೇಯಕ ಮಂಡನೆಗೆ ಮುಂದಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….