ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಾರ್ಮಿಕ ಇಲಾಖೆ ಸಹಭಾಗಿತ್ವದಲ್ಲಿ ಗಾರ್ಮೆಂಟ್ಸ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಕಾರ್ಮಿಕರಿಗಾಗಿ ವನಿತಾ ಸಂಗಾತಿ ಯೋಜನೆಯಡಿಯಲ್ಲಿ ಉಚಿತ ಮಾಸಿಕ ಬಸ್ ಪಾಸುಗಳನ್ನು ಮುಂದಿನ ತಿಂಗಳಿನಿಂದ ವಿತರಿಸಲಿದೆ.
ವನಿತಾ ಸಂಗಾತಿ ಪಾಸ್ ಪಡೆಯಲಿಚ್ಚಿಸುವ ಮಹಿಳಾ ಕಾರ್ಮಿಕರು, ಕರ್ತವ್ಯ ನಿರ್ವಹಿಸುವ ಗಾರ್ಮೆಂಟ್ಸ್ ಕಾರ್ಖಾನೆ ಮಾಲೀಕರಿಗೆ ಮನವಿ ಸಲ್ಲಿಸಬೇಕು, ಮಾಲೀಕರು ಪಾಸ್ ಪಡೆಯಲಿಚ್ಚಿಸುವ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಇ-ಮೇಲ್ ವಿಳಾಸ Welfare commissioner123 @gmail.com ಗೆ ಸಲ್ಲಿಸಬೇಕಿದೆ.
ವನಿತಾ ಸಂಗಾತಿ ಪಾಸು ಪಡೆದ ಮಹಿಳಾ ಕಾರ್ಮಿಕರು ಸಂಸ್ಥೆಯ ಎಲ್ಲಾ ಸಾಮಾನ್ಯ ಸೇವೆಯ ಬಸ್ ಗಳಲ್ಲಿ ಅನಿಯಮಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….