ಬೆಂ.ಗ್ರಾ.ಜಿಲ್ಲೆ: ಕಾರ್ಮಿಕ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ

ಬೆಂ.ಗ್ರಾ.ಜಿಲ್ಲೆ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕಾರ್ಮಿಕ ಮಂಡಳಿಯಲ್ಲಿ ನೋಂದಣಿ ಮಾಡಿ ಕೊಳ್ಳಬೇಕು. ನೋಂದಣಿಯಾದ ಕಾರ್ಮಿಕರ ಮಕ್ಕಳಿಗೆ ನರ್ಸರಿಯಿಂದ ಪಿ.ಎಚ್.ಡಿ ಯವರೆಗೂ ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಆರ್.ನಾಗೇಂದ್ರ ತಿಳಿಸಿದರು.

ಹೊಸಕೋಟೆ ತಾಲೂಕು ಗಿಡ್ಡಪನಹಳ್ಳಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ 1098 ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಬಾಲ ಕಾರ್ಮಿಕ ಪದ್ಧತಿ, (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ1986ರ,ಬಾಲ್ಯ ವಿವಾಹ ನಿಷೇಧ ಕಾಯ್ದೆ,ಮಕ್ಕಳ ಮೇಲಿನ ದೌರ್ಜನ್ಯಗಳು ಮತ್ತು ಅಂತರ್ಜಾಲ ಸುರಕ್ಷತೆಯ ಕುರಿತಾಗಿ ಮಕ್ಕಳಿಗೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಮಿಕರಿಗೆ ಮಾಸಿಕ ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ ಸೌಲಭ್ಯ, ವಿವಾಹ ಪ್ರೋತ್ಸಾಹ ಧನ, ದುರ್ಬಲತೆ ಪಿಂಚಣಿ ಸೌಲಭ್ಯ, ಹೆರಿಗೆ ಸೌಲಭ್ಯ, ಶಿಶುಪಾಲನ ಸೌಲಭ್ಯ ವೈದ್ಯಕೀಯ ಸಹಾಯಧನ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಬಿಎಂಟಿ ಬಸ್ ಪಾಸ್ ಸೌಲಭ್ಯ,ಹೀಗೆ ಇನ್ನಿತರ ಸೌಲಭ್ಯಗಳು ಲಭ್ಯವಿ ಎಂದು ಹೇಳಿದರು.

ಪೋಷಕರು ಕಟ್ಟಡ ಕಾರ್ಮಿಕರು ಹಾಗಿದ್ದಲ್ಲಿ, ಈ ಕೂಡಲೇ ತಾಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ  ನೀಡಿ, ನೊಂದಣಿಯಾಗಿ ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಸುಬ್ಬರಾವ್.ಎಸ್ ಅವರು ಮಾತನಾಡಿ ಮಕ್ಕಳ ರಕ್ಷಣೆ ಹಾಗೂ ಸಂರಕ್ಷಣೆಗಾಗಿ ಹಲವು  ಕಾಯ್ದೆಗಳು ಇದ್ದರೂ ಸಹ ಮಕ್ಕಳಿಂದ ದುಡಿಸಿಕೊಳ್ಳುತ್ತಿರುವುದು ದುಃಖದ ವಿಷಯವಾಗಿದೆ ಎಂದು ತಿಳಿಸಿದರು.

14 ವರ್ಷದೊಳಗಿನ ಮಕ್ಕಳು ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ  ದುಡಿಸಿದ್ದಲ್ಲಿ, ಅಂತಹವರಿಗೆ ಕನಿಷ್ಠ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಹಾಗೂ ಗರಿಷ್ಠ 2 ವರ್ಷದವರೆಗೆ ಜೈಲು ಶಿಕ್ಷೆ ಮತ್ತು 20 ಸಾವಿರದಿಂದ ರೂ. 50 ಸಾವಿರದವರೆಗೂ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು  ತಿಳಿಸಿದರು.

18 ವರ್ಷದೊಳಗಿನ ಮಕ್ಕಳನ್ನು ಹೋಟೆಲ್, ಗ್ಯಾರೇಜ್, ಅಂಗಡಿಗಳು, ಮಾರುಕಟ್ಟೆ, ಬಾರ್ ಮತ್ತು ರೆಸ್ಟೊರೆಂಟ್, ಮಾಂಸದ ಅಂಗಡಿ, ಇತ್ಯಾದಿ ಸ್ಥಳಗಳಲ್ಲಿ ಕೆಲಸಕ್ಕೆ ನೇಮಿಸಿ ಕೊಂಡಿರುವುದು ಕಂಡು ಬಂದಲ್ಲಿ, ಸಾರ್ವಜನಿಕರು ಕೂಡಲೇ ಮಕ್ಕಳ ಉಚಿತ ಸಹಾಯವಾಣಿ-1098 ಗೆ ಅಥವಾ ಪೆನ್ಸಿಲ್ ಪೂಟಲ್ https://pencil.gov.inನಲ್ಲಿ ದೂರು ದಾಖಲಿಸಬಹುದು ಎಂದು ಹೇಳಿದರು. 

ಹೊಸಕೋಟೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿದ್ಯಾ ಅವರು ಮಾತನಾಡಿ ಯಾರಾದರೂ ಬಾಲ್ಯವಿವಾಹ ಮಾಡಿಕೊಂಡರೆ ಅಥವಾ ಮಾಡಿದರೆ ಅವರು ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ರಡಿಯಲ್ಲಿ ಶಿಕ್ಷಾರ್ಹ ಅಪರಾಧ. ಅಂತಹ ಮದುವೆಯಲ್ಲಿ ಭಾಗವಹಿಸುವರು, ಕಲ್ಯಾಣ ಮಂಟಪ ಮಾಲೀಕರು,  ಪುರೋಹಿತರು, ಛಾಯಾಗ್ರಾಹಕರು, ವರನ ಪೋಷಕರು. ಮಗುವಿನ ಪೋಷಕರು ಮತ್ತು ದಲ್ಲಾಳಿಗಳು ತಪ್ಪಿತಸ್ಥರಾಗುತ್ತಾರೆ. ಅವರಿಗೆ ಕನಿಷ್ಠ 2 ವರ್ಷ ಜೈಲು 2ಲಕ್ಷದವರೆಗೂ ದಂಡ ವಿಧಿಸಲು ಅವಕಾಶವಿದೆ ಎಂದು ಮಾಹಿತಿ ನೀಡಿದರು.

ಬಾಲ್ಯ ವಿವಾಹ ಕಂಡುಬಂದರೆ ಮಕ್ಕಳ ಸಹಾಯವಾಣಿ 1098ಗೆ ತಿಳಿಸಬಹುದು ಮತ್ತು ಹತ್ತಿರದ ಪೊಲೀಸ್ ಠಾಣೆ, ಗ್ರಾಮ ಪಂಚಾಯಿತಿ, ಶಾಲಾ ಮುಖ್ಯೋಪಾಧ್ಯಾಯರಿಗೆ ತಿಳಿಸಲು ಸಲಹೆ ನೀಡಿದರು.

ಮಕ್ಕಳ ಸಹಾಯವಾಣಿ ಜಿಲ್ಲಾ  ಸಂಯೋಜಕ ಮಂಜುನಾಥ್ ಅವರು ಮಾತನಾಡಿ 18 ಮಕ್ಕಳು ಮೊಬೈಲ್ ಮತ್ತು ಅಂತರ್ಜಾಲ ಬಳಸುವುದರಲ್ಲಿ ಜಾಗರೂಕರಾಗಿರಬೇಕು. 18 ವರ್ಷದೊಳಗಿನ ಮಕ್ಕಳು ಅಂತರ್ಜಾಲವನ್ನು ಬಳಸುವುದರಿಂದ ಅಪರಿಚಿತರು ಮಕ್ಕಳನ್ನು ಸುಲಭವಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಅಂತರ್ಜಾಲದಿಂದ ಎಷ್ಟು ಲಾಭವಿದೆಯೋ ಅಷ್ಟೇ ಮಕ್ಕಳ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೊಸಕೋಟೆ ತಾಲ್ಲೂಕು ಕಾರ್ಮಿಕ ನಿರೀಕ್ಷಕರಾದ ಯತೀಶ್, ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆ ಮುಖ್ಯೋಪಾಧ್ಯಾಯರಾದ ಶಶಿಕಲಾ, ಗಿಡ್ಡಪ್ಪ ನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನಾರಾಯಣಸ್ವಾಮಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯ ಪ್ರೋಗ್ರಾಂ ಮ್ಯಾನೇಜರ್ ಸಣ್ಣಕರಿಯಪ್ಪ.ಡಿ, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳಾದ ಮುರಳಿ ಮೋಹನ್.ಎಂ ಮತ್ತು ಮಂಜುನಾಥ.ಡಿ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಈ ಸರಕಾರ

[ccc_my_favorite_select_button post_id="104120"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ದೊಡ್ಡಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!

ದೊಡ್ಡಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!

ದೊಡ್ಡಬಳ್ಳಾಪುರ (Doddaballapura): ನೇಣು ಬೀಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಸಾಸಲು ಹೋಬಳಿಯ ಗರಿಕೇನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು 40 ವರ್ಷದ ಗಂಗರತ್ನಮ್ಮ ಎಂದು ಗುರುತಿಸಲಾಗಿದೆ. ಆರೂಢಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಮೃತಳು, ನಿನ್ನೆಯಿಂದ ಕಾಣೆಯಾಗಿದ್ದರು ಎನ್ನಲಾಗಿದೆ.

[ccc_my_favorite_select_button post_id="104116"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!