ಮೇಷ: ಆಸ್ತಿ ವಿವಾದ, ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು. ಸಭಾ ಸಮಾಜ ಕೀರ್ತಿ ಲಭಿಸುವುದು.
ವೃಷಭ: ಪ್ರಯತ್ನಕ್ಕೆ ತಕ್ಕ ಫಲ, ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು.
ಮಿಥುನ: ಕೆಲಸದ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ.
ಕಟಕ: ಆತಂಕ, ಹಿತ ಶತೃಗಳು. ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ.
ಸಿಂಹ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಸಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ.
ಕನ್ಯಾ: ಹಣ ವ್ಯಯ. ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ.
ತುಲಾ: ಮಕ್ಕಳಿಂದ ಶುಭಸುದ್ದಿ. ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
ವೃಶ್ಚಿಕ: ಹೊಸ ಉದ್ಯೋಗ ಚಿಂತೆ. ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ.ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವುದು.
ಧನಸ್ಸು: ಕೋಪಾ ತಾಪಾ, ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವುದು. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ.
ಮಕರ: ಮುಜುಗರದ ಸ್ಥಿತಿ ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವುದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು.
ಕುಂಭ: ಶುಭ ಸುದ್ದಿ ಬರುವುದು. ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವುದು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.
ಮೀನ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ, ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು.
ತಿಥಿ: ಸಪ್ತಮಿ
ನಕ್ಷತ್ರ: ಉತ್ತರಾ ನಕ್ಷತ್ರ
ರಾಹುಕಾಲ: 04:41 ರಿಂದ 06:06
ಗುಳಿಕಕಾಲ: 03:15 ರಿಂದ 04:41
ಯಮಗಂಡಕಾಲ: 12:24 ರಿಂದ 01:49
ಈ ದಿನದ ವಿಶೇಷ: ಶ್ರೀಮಾತೆ ಶ್ರೀ ಶಾರದಾದೇವಿ ಜಯಂತಿ
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….