ಬೆಂಗಳೂರು: ರಾಜ್ಯದಲ್ಲಿ ಹೊಸ ರೂಪಾಂತರಿ ಜಾಸ್ತಿಯಾಗ್ತಿರುವ ಹಿನ್ನಲೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ.
ಡಿಸೆಂಬರ್ 28ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ವರೆಗೂ ನೈಟ್ ಕರ್ಫ್ಯೂ 10 ದಿನಗಳ ಕಾಲ ಜಾರಿ ಇರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.
ಹೊಸ ಮಾರ್ಗಸೂಚಿ ಅನ್ವಯ ಡಿಸೆಂಬರ್ 28 ರಿಂದ ರಾತ್ರಿ 10 ಘಂಟೆಯಿಂದ ಬೆಳಿಗ್ಗೆ 5 ಘಂಟೆಯವರೆಗೂ ನೈಟ್ ಕರ್ಫ್ಯೂ ಜಾರಿ, ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷ ಸಂಭ್ರಮಾಚರಣೆ ನಿಷೇಧ, ಎಲ್ಲಾ ಹೋಟೆಲ್ಗಳಲ್ಲಿ ಶೇ.50 ರಷ್ಟು ಮಾತ್ರ ಆಸನ ವ್ಯವಸ್ಥೆ
ಉಳಿದಂತೆ ಎರಡು ಡೋಸ್ ಕಡ್ಡಾಯವಾಗಿ ತೆಗೆದುಕೊಳ್ಳಬೇಕಿದೆ, ಪಬ್, ಬಾರ್ ಹಾಗೂ ರೆಸ್ಟೋರೆಂಟ್ ಸೇರಿದಂತೆ ಸಿನಿಮಾ ಎಲ್ಲವೂ ರಾತ್ರಿ 10 ಗಂಟೆಯ ನಂತರ ಬಂದ್ ಮಾಡಲಾಗುತ್ತಿದ್ದು, ಡಿಸೆಂಬರ್ 28 ರಿಂದ ಮುಂದಿನ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….