ಮೇಷ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು.
ವೃಷಭ: ವಾಸಸ್ಥಾನ,ಉದ್ಯೋಗ ಸ್ಥಾನ ಬದಲಾವಣೆಯ ಯೋಗವಿದೆ.ಕೌಟುಂಬಿಕ ಸಮಸ್ಯೆಗಳು ದೂರಾಗುವುದು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ.
ಮಿಥುನ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವುದು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು.
ಕಟಕ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.
ಸಿಂಹ: ಅಭದ್ರತೆ ಕಾಡುವ ಸಂಭವವಿದೆ.ಸ್ಥಾನಚ್ಯುತಿ ಯಾಗುವ ಸಾಧ್ಯತೆ ಇದೆ.ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು.
ಕನ್ಯಾ: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಾಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ.
ತುಲಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ವೃಶ್ಚಿಕ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವುದು. ನೌಕರರ ತೊಂದರೆಗಳು ನಿವಾರಣೆಯಾಗುವುದು. ಔದ್ಯೋಗಿಕ ಪ್ರವಾಸಯೋಗವಿದೆ.
ಧನಸ್ಸು: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ.
ಮಕರ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು,ಎಲ್ಲಾ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.
ಕುಂಭ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದುವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.
ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ.
ತಿಥಿ: ಏಕಾದಶಿ
ನಕ್ಷತ್ರ: ವಿಶಾಖ ನಕ್ಷತ್ರ
ಈ ದಿನದ ವಿಶೇಷ: ಶ್ರೀ ರಂಗನಾಥ ಶಠಗೋಪುರ ಮಹಾದೇಶಿಕರ್ ತಿರುನಕ್ಷತ್ರ
ರಾಹುಕಾಲ: 01:51 ರಿಂದ 03:17
ಗುಳಿಕಕಾಲ: 09:34 ರಿಂದ 11:00
ಯಮಗಂಡಕಾಲ: 06:43 ರಿಂದ 08:08
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….