ಚೆನ್ನೈ: ತಮಿಳುನಾಡಿನ ಹಲವೆಡೆ ಭಾರಿ ಮಳೆಯಿಂದಾಗಿ ಪಟ್ಟಣ ಪ್ರದೇಶಗಳು ಜಲಾವೃತಗೊಂಡಿದ್ದು, ಚೆನ್ನೈ ಮತ್ತು ಪಕ್ಕದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ತಮಿಳುನಾಡಿನಲ್ಲಿ ಕಳೆದ ರಾತ್ರಿ ಮಳೆಗೆ ಕಂಬ ಉರುಳಿಬಿದ್ದು ವಿದ್ಯುತ್ ಸ್ಪರ್ಶದಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣೆ ಸಚಿವ ಕೆ.ಕೆ.ಎಸ್.ಎಸ್.ಆರ್.ರಾಮಚಂದ್ರನ್ ತಿಳಿಸಿದ್ದಾರೆ.
ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲೆಪಟ್ಟು ಜಿಲ್ಲಾಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, 24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲಾಗಳಲ್ಲಿ ಶಾಲೆಗಳು, ಕಾಲೇಜುಗಳು ಮತ್ತು ಅನಿವಾರ್ಯವಲ್ಲದ ಸರ್ಕಾರಿ ಕಚೇರಿಗಳು ಮುಚ್ಚಲಾಗಿದೆ.
ಸಮುದ್ರದಲ್ಲಿ ಚಂಡಮಾರುತ ಭಾರೀ ಮಳೆಗೆ ಕಾರಣವಾಗಿದೆ ,ರಾಜಧಾನಿ ಚೆನ್ನೈನಲ್ಲಿ 20 ಸೆಂ.ಮೀ ಮಳೆಯಾಗಿದ್ದು ಹಲವು ಪ್ರದೇಶಗಳು ನೀರಿನ ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….