ದೊಡ್ಡಬಳ್ಳಾಪುರ: ಕೋವಿಡ್-19 ವೈರಾಣುವಿನ ಹೊಸ ರೂಪಾಂತರಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ವಿವಿಧ ಗ್ರಾಮಗಳಿಗೆ ವೈದ್ಯಕೀಯ ತಂಡಗಳು ಭೇಟಿ ನೀಡಿ ಲಸಿಕೆ ನೀಡಲಾಯಿತು.
ಈ ವೇಳೆ ಕೋವಿಡ್ ಲಸಿಕಾಕರಣದ ಸ್ಥಳಗಳಿಗೆ ಭೇಟಿ ನೀಡಿದ ತಹಶೀಲ್ದಾರ್ ಮೋಹನಕುಮಾರಿ ಅವರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.
ಇದೇ ವೇಳೆ ನಗರದ ಇಸ್ಲಾಂಪುರಕ್ಕೆ ಭೇಟಿ ನೀಡಿ ಸ್ಥಳೀಯರಿಗೆ, ಮುಖಂಡರುಗಳಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಕರೆ ನೀಡಿದರು. ನಂತರ ತಾಲೂಕಿನ ಗೊಲ್ಲಹಳ್ಳಿ, ವಡ್ಡರಹಳ್ಳಿ ಗ್ರಾಮಗಳಿಗೆ ತೆರಳಿ ಲಸಿಕೆ ಪಡೆಯದ ಹಿರಿಯರಿಗೆ ಮನವೊಲಿಸಿ ಲಸಿಕೆ ಹಾಕಿಸಿದರು.
ಈ ಸಂದರ್ಭದಲ್ಲಿ ಗೊಲ್ಲಹಳ್ಳಿ ಗ್ರಾಮದ 100 ವರ್ಷದ ಹಿರಿಯರಾದ ರಾಮಾನಾಯ್ಕ ಅವರಿಗೆ ಧೈರ್ಯ ತುಂಬಿ ಕೋವಿಡ್ ಲಸಿಕೆ ಹಾಕಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಡಾ.ವಸುಧಾ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….