![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಬೆಂ.ಗ್ರಾ.ಜಿಲ್ಲೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022-23ನೇ ಸಾಲಿನ ಕ್ರೀಡಾ ಶಾಲೆ ಹಾಗೂ ಕ್ರೀಡಾ ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ.ಗೆ ಪ್ರವೇಶ ನೀಡಲು ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ತಾಲ್ಲೂಕುವಾರು ನಡೆಯಲಿದ್ದು, 7ನೇ ತರಗತಿ ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಆಯ್ಕೆ ಪ್ರಕ್ರಿಯೆ 2022ರ ಜನವರಿ 04 ರಂದು ಹೊಸಕೋಟೆ ತಾಲ್ಲೂಕಿನ ಶ್ರೀ ಚನ್ನಭೈರೇಗೌಡ ಜಿಲ್ಲಾ ಕ್ರೀಡಾಂಗಣ, ಜನವರಿ 05ರಂದು ನೆಲಮಂಗಲ ತಾಲ್ಲೂಕಿನ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ, ಜನವರಿ 06ರಂದು ದೇವನಹಳ್ಳಿ ಟೌನ್ ಕ್ರೀಡಾಂಗಣ, ಜನವರಿ 07ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಗಾಗಿ ಹೊಸಕೋಟೆ ತಾಲ್ಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರು- ಸಂಚಾಲಕರಾದ ಹುಸೇನ್ ಮೊ.ಸಂ.: 9113218838, ದೈಹಿಕ ಶಿಕ್ಷಣ ಶಿಕ್ಷಕ ರಾಘವನ್ ಮೊ.ಸಂ.: 8762939296, ನೆಲಮಂಗಲ ತಾಲ್ಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರು- ಸಂಚಾಲಕರಾದ ರಾಜಪ್ಪ ಮೊ.ಸಂ.: 9901926397, ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ್ ಮೊ.ಸಂ.: 8660635308, ದೇವನಹಳ್ಳಿ ತಾಲ್ಲೂಕಿನ ಅಥ್ಲೆಟಿಕ್ಸ್ ತರಬೇತುದಾರರು- ಸಂಚಾಲಕರಾದ ಪ್ರಭು ಮೊ.ಸಂ.: 9945029942, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಗಾಯಿತ್ರಿದೇವಿ ಮೊ.ಸಂ.: 9481157982, ದೈಹಿಕ ಶಿಕ್ಷಣ ಶಿಕ್ಷಕ ಜನಾರ್ಧನ್ ಮೊ.ಸಂ.: 9611262811, ದೊಡ್ಡಬಳ್ಳಾಪುರ ತಾಲ್ಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರು- ಸಂಚಾಲಕರಾದ ಸುನಿಲ್‌ನಾಯಕ್ ಮೊ.ಸಂ.: 9449375395, ದೈಹಿಕ ಶಿಕ್ಷಣ ಶಿಕ್ಷಕ ನಾಗರಾಜ್ ಮೊ.ಸಂ.: 8310312958 ಅನ್ನು ಸಂಪರ್ಕಿಸಬಹುದಾಗಿದೆ.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯು 2022ರ ಜನವರಿ 24ರಂದು ಕಿರಿಯರ ವಿಭಾಗ ಹಾಗೂ 25ರಂದು ಹಿರಿಯರ ವಿಭಾಗ ಬೆಂಗಳೂರು ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಠಡಿ ಸಂಖ್ಯೆ: 112, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ಅಥವಾ ದೂ.ಸಂ.080-29787443, 9845608598 ಅಥವಾ 9632778567 ಅನ್ನು ಸಂರ್ಪಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗೀತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….