Site icon Harithalekhani

ದೊಡ್ಡಬಳ್ಳಾಪುರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಖೇಲೋ ಇಂಡಿಯಾ ಕೇಂದ್ರ ಸ್ಥಾಪನೆ

ದೊಡ್ಡಬಳ್ಳಾಪುರ: ಭಾರತ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಖೇಲೋ ಇಂಡಿಯಾ ಕೇಂದ್ರವನ್ನು  ನಗರದ ಶ್ರೀ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಸ್ಥಾಪಿಸಲಾಗಿದೆ.

ಖೇಲೋ ಇಂಡಿಯಾ ಕೇಂದ್ರದಲ್ಲಿ ನುರಿತ ತರಬೇತುದಾರರಿಂದ ಬಾಕ್ಸಿಂಗ್ ಕ್ರೀಡೆಯ ತರಬೇತಿ ನೀಡಲಾಗುವುದು.

ತರಬೇತಿ ಪಡೆಯುವ ಕ್ರೀಡಾಪಟುಗಳ ವಯಸ್ಸು 14 ರಿಂದ 23 ವರ್ಷದೊಳಗಿರಬೇಕು. ಕೇವಲ 30 ಕ್ರೀಡಾಪಟುಗಳಿಗೆ ಮಾತ್ರ ಅವಕಾಶವಿದ್ದು, ತರಬೇತಿ ಪಡೆಯಲಿಚ್ಛಿಸುವ ಕ್ರೀಡಾಪಟುಗಳು 2022ರ ಜನವರಿ 07ರೊಳಗೆ ಅರ್ಜಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಗೆ ಅಥವಾ ಕ್ರೀಡಾಂಗಣದಲ್ಲಿ ಸಲ್ಲಿಸಬಹುದಾಗಿದೆ.

ಇ-ಮೇಲ್: bangaloreruralyouthservices@gmail.com ಮುಖಾಂತರ ತಮ್ಮ ಬಯೋಡೇಟಾವನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ಮೊ.ಸಂ.: 9845608598 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version