Site icon ಹರಿತಲೇಖನಿ

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ / ಸಂಗ್ರಹವಾದ ಮೊತ್ತವೆಷ್ಟು ಗೊತ್ತಾ..!

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರದಲ್ಲಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಇಂದು (ಜ.3)ರಂದು ಎಣಿಕೆ ಮಾಡಲಾಯಿತು.

Aravind, BLN Swamy, Lingapura

ಹುಂಡಿ ಎಣಿಕೆಯಲ್ಲಿ ಒಟ್ಟು ರೂ 65ಲಕ್ಷ 53 ಸಾವಿರದ 684 ಮೊತ್ತ ಸಂಗ್ರಹವಾಗಿದೆ. ಇದರೊಂದಿಗೆ ರೂ 79,800 ಮೌಲ್ಯದ 2 ಕೆಜಿ 575 ಗ್ರಾಂ ಬೆಳ್ಳಿ, ರೂ19,600 ಮೌಲ್ಯದ 04 ಗ್ರಾಂ 800 ಮಿಲಿ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.

ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.

Aravind, BLN Swamy, Lingapura

ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಜಿ.ಜೆ.ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗಾರಾಜ್, ಪ್ರಧಾನ ಅರ್ಚಕ ಸುಬ್ರಮಣಿ ಸ್ವಾಮಿ, ಇಂಡಿಯನ್ ಓವರ್‍ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version