ದೊಡ್ಡಬಳ್ಳಾಪುರ: ನಗರದ ಶ್ರೀ ಮಲ್ಲಿಗೆ ಗಣಪತಿ ಸೇವಾ ಸಮಿತಿ ವತಿಯಿಂದ ದಿವಂಗತ ಪುನೀತ್ ರಾಜ್‍ಕುಮಾರ್ ನೆನಪಿನಲ್ಲಿ ಜ.16 ರಂದು ಭಾನುವಾರ ರಾಜ್ಯಮಟ್ಟದ ನಾಟಿ ಕೋಳಿ ಸಾಂಬಾರ್ ನಲ್ಲಿ ರಾಗಿ ಮುದ್ದೆ ಉಣ್ಣುವ ಸ್ಪರ್ಧೆಯನ್ನು ಸಂಜಯನಗರದ ಎಸ್.ಆರ್.ಸಿ.ಗರಡಿ ಮನೆ ಆವರಣದಲ್ಲಿ ಆಯೋಜಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಜಾನಪದ ಗ್ರಾಮೀಣ ಕ್ರೀಡೆಗಳು, ಸಾಂಸ್ಕೃತಿಕ ಚಟುವಟಿಕೆಗಳು ಕಣ್ಮರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಅವುಗಳನ್ನು ಯುವ ಸಮುದಾಯಕ್ಕೆ ಪರಿಚಯಿಸಲು ಈ ಸ್ಪರ್ಧೆ ಆಯೋಜಿಸಲಾಗಿದೆ.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮೋದಲ ಬಹುಮಾನ ರೂ 8000 ನಗದು, ಎರಡನೇ ಬಹುಮಾನ ರೂ 5000 ನಗದು, ಮೂರನೇ ಬಹುಮಾನ ರೂ 3000 ನಗದು ಹಾಗೂ ಸಾಮಾಧಾನಕರ ಬಹುಮಾನವಾಗಿ ಇಬ್ಬರಿಗೆ ತಲಾ ರೂ 1000 ನಗದು ನೀಡಲಾಗುತ್ತಿದೆ.
ಸ್ಪರ್ಧೆಯ ಕಾಲವಧಿ 20 ನಿಮಿಷಗಳಾಗಿದ್ದು, ಪ್ರವೇಶ ಧನ ರೂ 100 ನಿಗದಿ ಮಾಡಲಾಗಿದೆ, ಸ್ಪರ್ಧೆಯಲ್ಲಿ ಭಾಗವಹಿಸಲು ಜ.14 ರ ಒಳಗಾಗಿ ಹೆಸರು ನೊಂದಾಯಿಸಬೇಕಿದೆ.
ಅಲ್ಲದೆ ಜ.15 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಕ್ಕಳಿಗೆ ನೃತ್ಯ ಸ್ಪರ್ಧೆ, ಸ್ಲೋ ಸೈಕ್ಲಿಂಗ್, ಹೆಣ್ಣು ಮಕ್ಕಳಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕಾರ್ತಿಕ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ 7338351917, 7406766729, 9986879002, 8892593975 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….