ತೆಲಂಗಾಣ: ದೇಶದಲ್ಲಿ ದಿನೇ ದಿನೆ ಕೋವಿಡ್ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿವೆ. ದಿನನಿತ್ಯ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆ ಪಕ್ಕದ ರಾಜ್ಯ ತೆಲಂಗಾಣ ಸೋಂಕು ಹೆಚ್ಚಾಗಿರುವ ಕಾರಣ ಮಕ್ಕಳ ಆರೋಗ್ಯ ದೃಷ್ಠಿಯಿಂದ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಕೋವಿಡ್ ಪ್ರಕರಣಗಳು ಏರುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜನವರಿ 8 ರಿಂದ 16 ರವರೆಗೆ ರಜೆ ಘೋಷಿಸಲಾಗಿದೆ. ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸೋಮವಾರ ಈ ಘೋಷಣೆ ಮಾಡಿದ್ದಾರೆ.
ತೆಲಂಗಾಣದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಕುರಿತು ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಸೋಮವಾರ ಸಭೆ ನಡೆಸಿದರು. ಕೋವಿಡ್ ಎದುರಿಸಲು ಬೆಡ್, ಆಕ್ಸಿಜನ್ ಬೆಡ್, ಔಷಧಿಗಳು ಮತ್ತು ಪರೀಕ್ಷಾ ಕಿಟ್‌ಗಳನ್ನು ಖರೀದಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಸಾಮಾನ್ಯ ಜನರಿಗೆ ವೈದ್ಯಕೀಯ ಸೇವೆಗಳನ್ನು ಒದಗಿಸಲು ರಾಜ್ಯದಾದ್ಯಂತ ಹೆಚ್ಚಿನ ವಸತಿ ಪ್ರದೇಶಗಳಲ್ಲಿ ಕ್ಲಿನಿಕ್‌ಗಳನ್ನು ಸ್ಥಾಪಿಸಲು ಸಿಎಂ ನಿರ್ಧರಿಸಿದ್ದಾರೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ಹೇಳಲಾಗಿದೆ. ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಸದ್ಯಕ್ಕೆ ಲಾಕ್‌ಡೌನ್ ಅಗತ್ಯವಿಲ್ಲ ಎಂದು ಸಭೆಯಲ್ಲಿ ಆರೋಗ್ಯ ಅಧಿಕಾರಿಗಳು ಸಿಎಂ ಕೆ.ಚಂದ್ರಶೇಖರ್ ರಾವ್ ಅವರಿಗೆ ತಿಳಿಸಿದರು.
ಓಮಿಕ್ರಾನ್ ಭೀತಿಯಿರುವುದರಿಂದ ಈ ಸಂದರ್ಭದಲ್ಲಿ ಗುಂಪು ಸೇರುವುದು, ಬಹಿರಂಗ ಸಭೆ ಸೇರಬಾರದು, ಮೆರವಣಿಗೆಗಳಿಗೆ ಅವಕಾಶ ನೀಡಬಾರದೆಂದು ವೈದ್ಯಾಧಿಕಾರಿಗಳು ಸಿಎಂಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.
ಸೋಮವಾರ ಬೆಳಿಗ್ಗೆ ಭಾರತದಲ್ಲಿ 24 ಗಂಟೆಗಳಲ್ಲಿ 33,750 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಕೋವಿಡ್ ಪ್ರಕರಣಗಳು ಕಳೆದ ವಾರದಲ್ಲಿ 181 ಪ್ರತಿಶತ ಏರಿಕೆ ಕಂಡಿವೆ. ಡಿಸೆಂಬರ್ 27-ಜನವರಿ 2 ರಿಂದ, ಭಾರತವು ಸುಮಾರು 1.3 ಲಕ್ಷ ಹೊಸ ಪ್ರಕರಣಗಳನ್ನು ದಾಖಲಿಸಿದೆ ಎಂದು ಕೋಸ್ಟಲ್ ಮಿರರ್ ವರದಿ ಮಾಡಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….