ದೊಡ್ಡಬಳ್ಳಾಪುರ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪಿ.ಗೋವಿಂದರಾಜು ಅವರನ್ನು ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಮಹಾದೇವ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಮೀಳಮಹಾದೇವ್ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರನ್ನಾಗಿ ಘೋಷಿಸಿರುವ ಪಿ.ಗೋವಿಂದರಾಜು ಅವರು ಹಾಗೂ ಕಾರ್ಯದರ್ಶಿಗಳಾದ ಜಯರಾಮಯ್ಯ ಅವರುಗಳು ನಮ್ಮ ಮನೆಗೆ ಸೌಹಾರ್ದ ಭೇಟಿಗೆ ಬಂದಿದ್ದಾಗ, ಗೌರವಪೂರ್ವಕವಾಗಿ ಸನ್ಮಾನಿಸಿ ಪುಸ್ತಕಗಳನ್ನು ನೀಡಿ ಅಭಿನಂದಿಸಲಾಯಿತು ಎಂದಿದ್ದಾರೆ.
ಈ ವೇಳೆ ನಿಕಟಪೂರ್ವ ಕಸಾಪ ಜಿಲ್ಲಾ ಕೋಶಾಧ್ಯಕ್ಷ ನಂ.ಮಹಾದೇವ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….