Site icon ಹರಿತಲೇಖನಿ

ಮಕ್ಕಳ ಕೋವಿಡ್ ಲಸಿಕೆ ನೀಡಿಕೆಯಲ್ಲೂ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ

Channel Gowda
Hukukudi trust

ಚಿಕ್ಕಬಳ್ಳಾಪುರ: 15 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

Aravind, BLN Swamy, Lingapura

ಶುಕ್ರವಾರ ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡುತ್ತಾ, ಜನವರಿ 03 ರಿಂದ 15 ರಿಂದ 17 ವಯೋಮಾನದ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಮಾಡುವ ಕಾರ್ಯವನ್ನು ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿಯೂ ಚಾಲನೆ ನೀಡಿ  ಆರಂಭಿಸಲಾಗಿತ್ತು. ಅಂದಿನಿಂದ ಇಂದಿನವರೆಗೆ ಸಮಾರೋಪಾಧಿಯಲ್ಲಿ ಲಸಿಕಾಕರಣ ಕಾರ್ಯವನ್ನು ಕೈಗೆತ್ತಿಕೊಂಡ ಜಿಲ್ಲಾಡಳಿತ ಜಿಲ್ಲೆಯಲ್ಲಿರುವ ಈ ವಯೋಮಾನದ 65,545 ಮಕ್ಕಳ ಪೈಕಿ 39,050 ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡುವ ಮೂಲಕ ಶೇ.60 ರಷ್ಟು ಸಾಧನೆ ಮಾಡಿ ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದಕ್ಕೆ ಜಿಲ್ಲಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಜನವರಿ 05 ರಂದು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ರವರ ನಿರ್ದೇಶನದಂತೆ, ಜಿಲ್ಲೆಯಾದ್ಯಂತ ಯುವ ಕೋವಿಡ್ ಲಸಿಕಾ ಮೇಳವನ್ನು ಜಿಲ್ಲಾಡಳಿತ ಆಯೋಜಿಸಿತ್ತು. ಸದರಿ ಮೇಳವನ್ನು ನಗರದ ಜೂನಿಯರ್ ಕಾಲೇಜಿನಲ್ಲಿ  ಮಾನ್ಯ ಸಚಿವರು ಮಕ್ಕಳಿಗೆ ಲಸಿಕೆ ಹಾಕಿಸುವ ಮೂಖಾಂತರ ಉದ್ಘಾಟಿಸಿ ಮಕ್ಕಳಲ್ಲಿ ಮನೋಸ್ಥೈರ್ಯ ತುಂಬಿದ್ದರು. ಜಿಲ್ಲಾಡಳಿತದೊಂದಿಗೆ ಸದಾ ಮಾರ್ಗದರ್ಶನ ಹಾಗೂ ಸಹಕಾರ ನೀಡುತ್ತಿರುವ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ಕೆ ಜಿಲ್ಲಾಧಿಕಾರಿಗಳು ಧನ್ಯವಾದಗಳನ್ನು ತಿಳಿಸಿದರು.

Aravind, BLN Swamy, Lingapura

ಜೊತೆಗೆ ಜಿಲ್ಲಾಡಳಿತದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಲಸಿಕಾಕರಣದಲ್ಲಿ ತಂಡದ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತವೂ ಸಹ ಲಸಿಕಾಕರಣ ಕಾರ್ಯವನ್ನು ಭರದಿಂದ ನಡೆಸುತ್ತಿದ್ದಾರೆ. ಅದರಲ್ಲೂ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಮಕ್ಕಳು ಓದುವ ಶಾಲಾ ಕಾಲೇಜುಗಳಲ್ಲಿಯೇ ಲಸಿಕಾ ಸತ್ರಗಳನ್ನು ಯಶಸ್ವಿಯಾಗಿ ಆಯೋಜಿಸಿದ್ದರಿಂದ ರಾಜ್ಯ ಮಟ್ಟದ ಪಟ್ಟಿಯಲ್ಲಿ ಮೊದಲ ಸ್ಥಾನ ಗಳಿಸಲು ಸಾಧ್ಯವಾಗಿದೆ ಎಂದರು.

ಈ ಸಾಧನೆಗೆ ಸಹಕರಿಸಿದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಭಿನಂದನೆಗಳನ್ನು ತಿಳಿಸಿದರು. ಈ ವಯೋಮಾನದ ಮಕ್ಕಳಿಗೆ ಲಸಿಕೆ ಹಾಕಿಸುವುದರಲ್ಲಿ ಹಾಗೂ ಮೊದಲ ಡೋಸ್ ಲಸಿಕೆ ಪಡೆದು 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿರುವ ಬಾಕಿ ಇರುವ ಜಿಲ್ಲೆಯ ಜನರಿಗೆ ಲಸಿಕಾಕರಣ ಮಾಡಿ ಶೇ.100 ರಷ್ಟು ಪ್ರಗತಿ ಸಾಧಿಸುವ ಮೂಲಕ ಎರಡೂ ಡೋಸ್ ಗಳ ಲಸಿಕೆಯನ್ನು ರಾಜ್ಯದಲ್ಲಿಯೇ ಮೊದಲು ಪೂರ್ಣಗೊಳಿಸಿದ ಜಿಲ್ಲೆಯಾಗಿ ಚಿಕ್ಕಬಳ್ಳಾಪುರ ಜಿಲ್ಲೆ ಹೊರಹೊಮ್ಮಬೇಕು. ಆ ನಿಟ್ಟಿನಲ್ಲಿ ಜಿಲ್ಲಾಡಳಿತದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಲಸಿಕಾ ಉತ್ಸವ, ಅಭಿಯಾನ, ಮೇಳಗಳಲ್ಲಿ ಚಿಕ್ಕಬಳ್ಳಾಪುರ ಜನರು ಸದಾ ಸ್ಪಂಧನಾ ಶೀಲರು ಎಂಬುದನ್ನು ಈ ಹಿಂದೆ ನಡೆದ ಮೇಳಗಳಲ್ಲಿ ತೋರಿಸಿಕೊಟ್ಟು ರಾಜ್ಯ ಮಟ್ಟದಲ್ಲಿ ಹಲವು ಭಾರಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಗಳಿಸಲು ಕಾರಣಕರ್ತರಾಗಿದ್ದಾರೆ. ಅದೇ ರೀತಿಯೆ 15 ರಿಂದ 17 ರ ವಯೋಮಾನದ ಜಿಲ್ಲೆಯ ಮಕ್ಕಳು ಸ್ಪಂದನಾ ಶೀಲರೆಂದು ತೋರಿಸಿಕೊಟ್ಟಿದ್ದಾರೆ. ಹಾಗೆಯೇ ಜಿಲ್ಲೆಯ ಸಮಸ್ತ ಜನರು ಮುಂದಿನ ದಿನಗಳಲ್ಲೂ ಸಹಕಾರ ನೀಡಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಕೋವಿಡ್ ನಿಯಂತ್ರಣಾ ಮಾರ್ಗಸೂಚಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಕೋವಿಡ್ ನ 3ನೇ ಅಲೆ ಬರದಂತೆ ಸಹಕಾರ ನಿಡಬೇಕೆಂದು ಜಿಲ್ಲಾಧಿಕಾರಿಗಳು ಜನರಲ್ಲಿ ಮನವಿ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version