![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ದೊಡ್ಡಬಳ್ಳಾಪುರ: ಕರೊನಾ ವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಇಂದು ರಾತ್ರಿ 8 ರಿಂದ ಆರಂಭವಾಗಲಿರುವ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ, ತಾಲೂಕಿನ ಪ್ರಖ್ಯಾತ ಘಾಟಿ ಶ್ರೀ ಸುಬ್ರಹ್ಮಣ್ಯ ಹಾಗೂ ಮಧುರೆ ಶ್ರೀ ಶನಿಮಹಾತ್ಮ ದೇವಾಲಯಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಈ ಕುರಿತು ಮಾಹಿತಿ ನೀಡಿರುವ ಘಾಟಿ ಶ್ರೀ ಸುಬ್ರಹ್ಮಣ್ಯ ಇಒ ನಾಗಾರಾಜ್ ಹಾಗೂ ಮಧುರೆ ಶ್ರೀ ಶನಿಮಹಾತ್ಮ ದೇವಾಲಯದ ಧರ್ಮಾಧಿಕಾರಿ ಪ್ರಕಾಶ್, ಸರ್ಕಾರದ ಆದೇಶದ ಅನ್ವಯ ಜ.8 ರಿಂದ 17 ರ ವರೆಗೆ ಶನಿವಾರ ಮತ್ತು ಭಾನುವಾರ ದೇವಾಲಯಕ್ಕೆ ಸಾರ್ವಜನಿಕರ ಹಾಗೂ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ.
ಉಳಿದಂತೆ ದೇವಾಲಯದ ಧಾರ್ಮಿಕ ಆಚರಣೆಗಳನ್ನು ದೇವಾಲಯದ ಅರ್ಚಕರು ಹಾಗೂ ಸಿಬ್ಬಂದಿಗಳು ಮಾತ್ರ ನೆರವೇರಿಸಲಿದ್ದಾರೆಂದು ಹರಿತಲೇಖನಿಗೆ ತಿಳಿಸಿದ್ದಾರೆ.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ದೇವಾಲಯದ ಆವರಣದಲ್ಲಿ ಬ್ರಹ್ಮರಥೋತ್ಸವ: ನಾಳೆ ಜ.8ರಂದು ಷಷ್ಠಿ ಆಚರಣೆ ಅಂಗವಾಗಿ, ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿ ಬ್ರಹ್ಮರಥೋತ್ಸವ ನಡೆಯುತ್ತಿದೆ. ಅದರೆ ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ ನಡೆಯುತ್ತಿದ್ದು, ದೇವಸ್ಥಾನದ ಸಿಬ್ಬಂದಿ ಅಧಿಕಾರಿಗಳು ಮಾತ್ರ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….