ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕರೊನಾ ಮೂರನೇ ಅಲೆ ಆರಂಭವಾಗಿರುವ ನಡುವಲ್ಲೇ. 60 ವರ್ಷ ದಾಟಿದ ಅನಾರೋಗ್ಯ ಪೀಡಿತರು, ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮುಂಜಾಗ್ರತಾ ಡೋಸ್ (ಬೂಸ್ಟರ್ ಡೋಸ್) ಲಸಿಕಾ ಅಭಿಯಾನಕ್ಕೆ ಸೋಮವಾರ ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಿದರು.
ನಗರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಕಾರ್ಯಕರ್ತರು ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಅವರು, ಸ್ವತಃ ಲಸಿಕೆ ಪಡೆದರು.
ಈ ವೇಳೆ ತಹಶೀಲ್ದಾರ್ ಮೋಹನಕುಮಾರಿ, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್, ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….