Site icon ಹರಿತಲೇಖನಿ

ದಿನ ಭವಿಷ್ಯ: ಸೋಮವಾರ, ಜನವರಿ 10 , 2022, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ.

Channel Gowda
Hukukudi trust

ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟು ಮಾಡುವ ಸಾಧ್ಯತೆ ಇದೆ.

Aravind, BLN Swamy, Lingapura

ವೃಷಭ: ಉದರನೋವು ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಳಕಾರ್ಯ ಜರುಗುವ ಯೋಗವಿದೆ. ಕೋರ್ಟ್ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವುದು.

ಮಿಥುನ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವುದು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.

Aravind, BLN Swamy, Lingapura

ಕಟಕ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯ ವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವುದು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ.

ಸಿಂಹ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.

ಕನ್ಯಾ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯ ಕಾಣುವುದು. ಗೃಹ ಸೌಖ್ಯ ವಿರುವುದು.

ತುಲಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ.

ವೃಶ್ಚಿಕ: ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವುದು.

ಧನಸ್ಸು: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.

ಮಕರ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ.

ಕುಂಭ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಸಹನೆಯಿಂದ ವ್ಯವಹರಿಸಿರಿ. ಗುರುಬಲ ವೃದ್ಧಿಸುವುದು. ಮದುವೆಯ ಸಂಭ್ರಮದ ವಾತಾವರಣ ಕಂಡು ಬರುವುದು. ಹಿರಿಯರ ಮಾತಿನಂತೆ ನಡಯುವುದು ಉತ್ತಮ.

ಮೀನ: ವೃಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥಳದಲ್ಲಿ ಶುಭ ಗ್ರಹ ಇರುವುದರಿಂದ ಆರ್ಥಿಕ ಸುಭದ್ರತೆ ಇರುವುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವುದು. ಗೋ ಸೇವೆಯಿಂದ ಕಷ್ಟಪರಿಹಾರವಾಗುವುದು .
 

ತಿಥಿ:
ಅಷ್ಟಮಿ

ನಕ್ಷತ್ರ:
ರೇವತಿ ನಕ್ಷತ್ರ

ರಾಹುಕಾಲ: 08:12 ರಿಂದ 09:38

ಗುಳಿಕಕಾಲ:
01:56 ರಿಂದ 03:22

ಯಮಗಂಡಕಾಲ: 
11:04 ರಿಂದ 12:30

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version