ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಸಲು 2022ರ ಜನವರಿ 30 ರವರೆಗೆ ಅವಧಿ ವಿಸ್ತರಿಸಲಾಗಿದೆ.
|| ಪಿಯುಸಿ/ 3 ವರ್ಷದ ಡಿಪ್ಲೋಮಾ ಪಾಲಿಟೆಕ್ನಿಕ್(||PUC/3Years Diploma Polytechnic) ವಿದ್ಯಾರ್ಥಿಗಳಿಗೆ 20,000/-ರೂ.ಗಳು, ಪದವಿ(Degree) ವಿದ್ಯಾರ್ಥಿಗಳಿಗೆ 25,000/-ರೂ.ಗಳು, ಪದವಿ ನಂತರದ ಕೋರ್ಸ್‌ಗಳಾದ ಎಂ.ಎ, ಎಂ.ಎಸ್ಸಿ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಫ್.ಎ ಇತ್ಯಾದಿ(Post Graduate Course like MA, M.sc, Mcom, MBA, MCA, MFA etc.,) ವಿದ್ಯಾರ್ಥಿಗಳಿಗೆ 30,000/- ರೂ.ಗಳು, ಅಗ್ರಿಕಲ್ಚರ್/ಎಂಜಿನಿಯರಿಂಗ್/ ಮೆಡಿಸಿನ್/ ವೆಟರ್ನರಿ (Agriculture/Engineering/Medicine/ Vetrinary) ವಿದ್ಯಾರ್ಥಿಗಳಿಗೆ 35,000/- ರೂ.ಗಳನ್ನು ಪ್ರೋತ್ಸಾಹಧನವಾಗಿ ನೀಡಲಾಗುವುದು.
ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಇಲಾಖಾ ವೆಬ್‍ಸೈಟ್ www.tw.kar.nic.in ನಲ್ಲಿ 2022ರ ಜನವರಿ 30 ರೊಳಗೆ ಸಲ್ಲಿಸುವುದು.
ಪಿಯುಸಿ ಹಾಗೂ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ದೃಡೀಕೃತ ದಾಖಲಾತಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ: 205, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಈ ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-29787448 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….