ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆಗೆ ಸ್ಪರ್ಧಿಸಿದ್ದ ಕೇಂದ್ರದ ಮಾಜಿ ಸಚಿವ ದಿ.ಆರ್.ಎಲ್.ಜಾಲಪ್ಪರ ಪುತ್ರ ಜೆ.ರಾಜೇಂದ್ರ 145 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.
ಜ.9ರಂದು ಬೆಂಗಳೂರಿನ ಈಡಿಗರ ಭವನದಲ್ಲಿ ಚುನಾವಣೆ ಪ್ರಕ್ರಿಯೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆ.ರಾಜೇಂದ್ರ ಅವರು ಪ್ರತಿಸ್ಪರ್ಧಿ ರಾಮಾಂಜಿನಿ ಅವರ ವಿರುದ್ಧ 145 ಮತಗಳ ಅಂತರದಿಂದ ವಿಜೇತರಾಗಿದ್ದಾರೆ. ಇನ್ನು ಮಹಿಳಾ ಕ್ಷೇತ್ರದಿಂದ ದೊಡ್ಡಬಳ್ಳಾಪುರದ ಶಾಂತಿನಗರದ ಶಾಂತರಾಜಕುಮಾರಿ ಅವರು ವಿಜೇತರಾಗಿದ್ದರೆ.
ವಿಜೇತರಾಗಿದ ಜೆ.ರಾಜೇಂದ್ರ ಅವರನ್ನು ಆರ್.ಜಾಲಪ್ಪ ಶಿಕ್ಷಣ ಸಂಸ್ಥೆಯ ಎಇಇ ರಮೇಶ್ ಅವರು ಅಭಿನಂದನೆ ಸಲ್ಲಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….