ತಿರುವನಂತಪುರಂ: ಮಲಯಾಳಂ ಸಿನಿಮಾ ರಂಗದ ಖ್ಯಾತ ನಿರ್ದೇಶಕ ಅಲಿ ಅಕ್ಬರ್ ಹಾಗೂ ಅವರ ಪತ್ನಿ ಇಸ್ಲಾಂ ಧರ್ಮವನ್ನು ತೊರೆದು ಹಿಂದು ಧರ್ಮಕ್ಕೆ ಮತಾಂತರಗೊಂಡಿದ್ದಾರೆ.
ಸಿಡಿಎಸ್ ಬಿಪಿನ್ ರಾವತ್ ಅವರು ದುರ್ಮರಣಕ್ಕೀಡಾಗಿ ಸಾವನ್ನಪ್ಪಿದ್ದ ವಿಷಯದಲ್ಲಿ ಕೆಲವು ಮುಸ್ಲಿಮರು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮ ಹಂಚಿಕೊಂಡಿದ್ದರು. ಈ ವಿಚಾರವಾಗಿ ಬೇಸತ್ತಿದ್ದ ನಿರ್ದೇಶಕ ಅಲಿ ಅಕ್ಬರ್ ಧರ್ಮ ತೊರೆಯುವ ನಿರ್ಧಾರ ಕೈಗೊಂಡಿದ್ದರು. ಅಲ್ಲದೆ ಈ ವಿಚಾರವಾಗಿ ಸ್ವತಃ ನಿರ್ದೇಶಕ ಅಲಿ ಅಕ್ಬರ್ ಅವರೇ ಪತ್ನಿ ಹಾಗೂ ನಾನು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವ ನಿರ್ಧಾರ ಮಾಡಿದ್ದೇವೆ ಎಂದು ವಿಡಿಯೋ ಒಂದರಲ್ಲಿ ಹೇಳಿಕೊಂಡಿದ್ದರು
ಸಿಡಿಎಸ್ ಬಿಪಿನ್ ರಾವತ್ ಅವರ ಘಟನೆಯಿಂದ ನಮ್ಮ ಮನಸ್ಸಿಗೆ ತುಂಬಾ ನೋವಾಗಿದೆ ಹಾಗಾಗಿ ನಾನು ಮತ್ತು ನನ್ನ ಪತ್ನಿ ಇನ್ನು ಮುಂದೆ ಮುಸ್ಲಿಂ ಧರ್ಮದ ಮೇಲಿನ ನಂಬಿಕೆಯನ್ನು ಬಿಟ್ಟು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವುದಾಗಿ ಹೇಳಿದ್ದರು.ಅಲ್ಲದೆ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದ ಕಿಡಿಗೇಡಿಗಳನ್ನು ಕೂಡಲೇ ಪತ್ತೆಹಚ್ಚಿ ಅವರಿಗೆ ಶಿಕ್ಷೆ ವಿಧಿಸುವಂತೆ ಮನವಿಯನ್ನು ಮಾಡಿದ್ದರು.
ಈ ಎಲ್ಲಾ ಕಾರಣಗಳಿಂದಾಗಿ ಇಂದು ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ ಎನ್ನಲಾಗಿದೆ. ಈ ಕುರಿತಾದ ಪೊಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….