ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿಂದು 503 ಮಂದಿಗೆ ಸೋಂಕು ದೃಢಪಟ್ಟಿದ್ದು, 38 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಜ.15ರ ಬುಲೆಟಿನ್ ಅನ್ವಯ ಇಂದು ಜಿಲ್ಲೆಯಲ್ಲಿ ಹೊಸದಾಗಿ 500 ಕರೊನಾ ಪ್ರಕರಣಗಳು ವರದಿಯಾಗಿದೆ. ಅಲ್ಲದೆ ಹೊರ ರಾಜ್ಯ ಹೊರ ಜಿಲ್ಲೆಯ 03ಮಂದಿಗೆ ಸೋಂಕು ದೃಢಪಟ್ಟಿದೆ. ಉಳಿದಂತೆ ಇಂದು ಕೋವಿಡ್ ಸೋಂಕಿನಿಂದ 38 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ವರದಿಯನ್ವಯ ಹೊಸಕೋಟೆ ತಾಲೂಕಿನ 68 ಪುರುಷರು, 45 ಮಹಿಳೆಯರು ಸೇರಿ 113.
ದೇವನಹಳ್ಳಿ ತಾಲೂಕಿನ 53 ಪುರುಷರು, 17 ಮಹಿಳೆಯರು ಸೇರಿ 70.
ದೊಡ್ಡಬಳ್ಳಾಪುರ ತಾಲೂಕಿನ 39 ಪುರುಷರು, 38 ಮಹಿಳೆಯರು ಸೇರಿ 77. ಹಾಗೂ ನೆಲಮಂಗಲ ತಾಲೂಕಿನ 148 ಪುರುಷರು, 92 ಮಹಿಳೆಯರು ಸೇರಿ 240 ಮತ್ತು ಒಟ್ಟು 503 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2066ಕ್ಕೆ ಏರಿಕೆಯಾಗಿದೆ. ಅಲ್ಲದೆ 3227 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಪ್ರಕಾರ 2478 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಶಾಸಕರಿಗೆ ಸೋಂಕು: ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರಿಗೆ ಇಂದು ಕೋವಿಡ್-19 ದೃಢಪಟ್ಟಿದ್ದು, ಅವರ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿಕೊಂಡಿದ್ದಾರೆ.
(ಆತಂಕ ಬೇಡಾ, ಮುಂಜಾಗ್ರತೆ ಇರಲಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….