ದೊಡ್ಡಬಳ್ಳಾಪುರ: ಕರೊನಾ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ತಾಲೂಕಿನ ಪ್ರಖ್ಯಾತ ಘಾಟಿ ಶ್ರೀ ಸುಬ್ರಹ್ಮಣ್ಯ ಹಾಗೂ ಮಧುರೆ ಶ್ರೀ ಶನಿ ಮಹಾತ್ಮ ದೇವಾಲಯಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಘಾಟಿ ಶ್ರೀ ಸುಬ್ರಹ್ಮಣ್ಯ ಇಒ ನಾಗಾರಾಜ್ ಹಾಗೂ ಮಧುರೆ ಶ್ರೀ ಶನಿ ಮಹಾತ್ಮ ದೇವಾಲಯದ ಧರ್ಮದರ್ಶಿ ಪ್ರಕಾಶ್, ಸರ್ಕಾರದ ಆದೇಶದ ಅನ್ವಯ ಜ.17 ರ ವರೆಗೆ ಶನಿವಾರ ಮತ್ತು ಭಾನುವಾರ ದೇವಾಲಯಕ್ಕೆ ಸಾರ್ವಜನಿಕರ ಹಾಗೂ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ.
ಉಳಿದಂತೆ ದೇವಾಲಯದ ಧಾರ್ಮಿಕ ಆಚರಣೆಗಳನ್ನು ದೇವಾಲಯದ ಅರ್ಚಕರು ಹಾಗೂ ಸಿಬ್ಬಂದಿಗಳು ಮಾತ್ರ ನೆರವೇರಿಸಲಿದ್ದಾರೆಂದು ಹರಿತಲೇಖನಿಗೆ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….