ದೊಡ್ಡಬಳ್ಳಾಪುರ: ರಾಷ್ಟ್ರೀಯ ಯುವ ದಿನವು ಭಾರತದ ಯುವಪೀಳಿಗೆಯ ಮತ್ತು ಯುವಕರಿಗೆ ಮೀಸಲಾಗಿರುವ ದಿನವಾಗಿದ್ದು, ಸ್ವಾಮಿ ವಿವೇಕಾನಂದರು ಈ ದಿನ ಜನಿಸಿರುವುದರಿಂದ ಅವರ ಜನ್ಮದಿನವನ್ನು ದೇಶವು ಪ್ರತಿ ವರ್ಷ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್ ಡಿ ಯು ಐ ಎಂ ನ ಪ್ರಾಂಶುಪಾಲರಾದ ಜೆ.ವಿ.ಚಂದ್ರಶೇಖರ್ ಹೇಳಿದರು.
ನಗರದ ಶ್ರೀ ದೇವರಾಜ ಅರಸು ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ, ಸ್ವಾಮಿ ವಿವೇಕಾನಂದರ ನಿಜವಾದ ಹೆಸರು ನರೇಂದ್ರನಾಥ ದತ್. ಸ್ವಾಮಿ ವಿವೇಕಾನಂದರು ಧರ್ಮ, ತತ್ವಶಾಸ್ತ್ರ, ಇತಿಹಾಸ, ಕಲೆ, ಸಮಾಜ ವಿಜ್ಞಾನ, ಸಾಹಿತ್ಯ ಬಲ್ಲವರಾಗಿದ್ದರು. ಶಿಕ್ಷಣದಲ್ಲಿ ಉತ್ತಮವಾದುದಲ್ಲದೆ ಭಾರತೀಯ ಶಾಸ್ತ್ರೀಯ ಸಂಗೀತದ ಜ್ಞಾನವನ್ನೂ ಹೊಂದಿದ್ದರು. ಇದಲ್ಲದೆ, ವಿವೇಕಾನಂದ ಅವರು ಉತ್ತಮ ಆಟಗಾರರು ಸಹ ಆಗಿದ್ದರು. ಅವರು ಯುವಕರಿಗೆ ಸ್ಫೂರ್ತಿಯಾಗುವುದರಲ್ಲಿ ಯಾವುದರಲ್ಲೂ ಕಡಿಮೆಯಿರಲಿಲ್ಲ. ಅನೇಕ ಸಂದರ್ಭಗಳಲ್ಲಿ ಅವರು ತಮ್ಮ ಅಮೂಲ್ಯವಾದ ಆಲೋಚನೆಗಳು ಮತ್ತು ಸ್ಪೂರ್ತಿದಾಯಕ ಮಾತುಗಳೊಂದಿಗೆ ಮುಂದುವರಿಯಲು ಯುವಕರನ್ನು ಪ್ರೋತ್ಸಾಹಿಸುತ್ತಿದ್ದರು ಆಗಾಗಿ ಈ ದಿನವನ್ನು ರಾಷ್ಟ್ರೀಯ ಯುವ ದಿನ ಎಂದು ಕರೆಯುತ್ತಿರುವುದು ಎಂದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ದಕ್ಷಿಣಮೂರ್ತಿ, ಚೈತ್ರ, ಪ್ರಕಾಶ್, ರವಿಕುಮಾರ್, ಲಕ್ಷ್ಮೀಶ ಮತ್ತಿತರರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….