ಬೆಂ.ಗ್ರಾ.ಜಿಲ್ಲೆ: 2022ರ ಜನವರಿ 26ರಂದು ನಡೆಯಲಿರುವ 73ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವಂತಹ ಸಾಧಕರಿಗೆ ಸನ್ಮಾನ ಮಾಡಲು ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾವೈಕ್ಯತೆ, ಕ್ರೀಡೆ, ವಿಜ್ಞಾನ, ಜಾನಪದ ಕಲೆ, ಉತ್ತಮ ಸಾರ್ವಜನಿಕ ಸೇವೆ ಸಲ್ಲಿಸಿರುವ ಸ್ವಯಂ ಸೇವಾ ಸಂಸ್ಥೆಗಳು, ಕೃಷಿ, ತೋಟಗಾರಿಕೆ, ರೇಷ್ಮೆ ಪಶುಸಂಗೋಪನೆಯ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದ ರೈತರು, ಕೋವಿಡ್ ನಿರ್ವಹಣೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿ/ಸಿಬ್ಬಂದಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರು ಮೇಲೆ ತಿಳಿಸಿದ ಕ್ಷೇತ್ರಗಳಲ್ಲಿ ಮಾಡಿರುವ ಕಳೆದ ಮೂರು ವರ್ಷಗಳ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು, ಕಳೆದ ಮೂರು ವರ್ಷಗಳಲ್ಲಿ ಮಾಡಿರುವ ಸಾಧನೆಗಳ ದಾಖಲೆಗಳನ್ನು, ಪೋಟೋ, ಪತ್ರಿಕಾ ತುಣುಕು, ಪ್ರಮಾಣ/ಪ್ರಶಸ್ತಿ ಪತ್ರಗಳೊಂದಿಗೆ ಅರ್ಜಿಯನ್ನು 2022ರ ಜನವರಿ 21 ರೊಳಗಾಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇವರ ಕಚೇರಿಗೆ ಸಲ್ಲಿಸುವುದು.
ಹಿಂದಿನ ವರ್ಷಗಳ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವದಲ್ಲಿ ಸನ್ಮಾನ ಸ್ವೀಕರಿಸಿದವರು ಅರ್ಜಿಯನ್ನು ಸಲ್ಲಿಸುವಂತಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣ್ಣಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….