ಚೆನ್ನೈ: ಖ್ಯಾತ ನಟ ರಜನಿಕಾಂತ್ ಹಿರಿಯ ಪುತ್ರಿ ಐಶ್ವರ್ಯಾ ಹಾಗೂ ನಟ ಧನುಷ್ ಅವರ ದಾಂಪತ್ಯ ಜೀವನ ಅಂತ್ಯಗೊಂಡಿದೆ.
ಸೋಮವಾರ ರಾತ್ರಿ ತಮ್ಮ ಟ್ವಿಟರ್ ಖಾತೆ ಮೂಲಕ ಈ ವಿಚಾರವನ್ನು ಸ್ವತಃ ಧನುಷ್ ತಿಳಿಸಿದ್ದಾರೆ.
18 ವರ್ಷಗಳ ಕಾಲ ಸ್ನೇಹಿತರಂತೆ, ದಂಪತಿಗಳಂತೆ, ಪೋಷಕರಂತೆ ಮತ್ತು ಪರಸ್ಪರ ಹಿತೈಷಿಗಳಾಗಿದ್ದೆವು. ನಮ್ಮ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿದೆ. ಇಂದು ನಾವು ನಮ್ಮ ಮಾರ್ಗಗಳನ್ನು ಪ್ರತ್ಯೇಕಗೊಳಿಸುವಿಕೆಯ ಜಾಗದಲ್ಲಿ ಬಂದು ನಿಂತಿದ್ದೇವೆ. ಜೋಡಿಯಾಗಿದ್ದ ನಾವು ಬೇರೆಯಾಗಲು ಮತ್ತು ನಮ್ಮನ್ನು ನಾವು ಇನ್ನಷ್ಟು ಚೆನ್ನಾಗಿ ಅರ್ಥೈಸಿಕೊಳ್ಳಲು, ಸಮಯ ಕೊಡಲು ನಾನು ಮತ್ತು ಐಶ್ವರ್ಯ ನಿರ್ಧರಿಸಿದ್ದೇವೆ. ದಯವಿಟ್ಟು ನಮ್ಮ ನಿರ್ಧಾರವನ್ನು ಗೌರವಿಸಿ ಮತ್ತು ಇದನ್ನು ನಿಭಾಯಿಸಲು ನಮಗೆ ಬೇಕಿರುವ ಗೌಪ್ಯತೆಯನ್ನು ನೀಡಿ. ಓಂ ನಮಃ ಶಿವಾಯ’ ಎಂದು ಬರೆದುಕೊಂಡಿದ್ದಾರೆ ಧನುಷ್.
ಇದು ಧನುಷ್ ಮತ್ತು ರಜನಿಕಾಂತ್ ಅಭಿಮಾನಿಗಳಿಗೆ ಅಚ್ಚರಿಯನ್ನು ಉಂಟು ಮಾಡಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….