Site icon ಹರಿತಲೇಖನಿ

ಸಂಸ್ಕೃತ ವಿವಿ ಸ್ಥಾಪನೆಗೆ ದೊಡ್ಡಬಳ್ಳಾಪುರದಲ್ಲಿ ವಿವಿಧ ಸಂಘಟನೆಗಳ ವಿರೋಧ

Channel Gowda
Hukukudi trust

ದೊಡ್ಡಬಳ್ಳಾಪುರ: ಶಾಸ್ತ್ರೀಯ ಸ್ಥಾನಮಾನ ಪಡೆದ ಕನ್ನಡಭಾಷೆಗೆ ಸರಿಯಾದ ಮಾನ್ಯತೆ ನೀಡದೇ, ರಾಜ್ಯದಲ್ಲಿ ನೂತನವಾಗಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯವಾಗಿದ್ದು, ರಾಜ್ಯಕ್ಕೆ ಅಗತ್ಯವಿಲ್ಲದ  ಈ ಪ್ರಸ್ತಾವನೆಯನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕಿದೆ ಎಂದು ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

Aravind, BLN Swamy, Lingapura

ನಗರದ ಪ್ರವಾಸಿ ಮಂದಿರದಲ್ಲಿ  ಕನ್ನಡ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ, ಕನ್ನಡಪಕ್ಷದ ತಾಲೂಕು ಅಧ್ಯಕ್ಷ ಸಂಜೀವ್ ನಾಯಕ್, ರೈತ ಮುಖಂಡರಾದ ಸುಲೋಚನಮ್ಮ ವೆಂಕಟರೆಡ್ಡಿ, ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ರಾಜ್ಯ ಸರ್ಕಾರ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆ. 2ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿರುವ ಕನ್ನಡಭಾಷೆ, ನಾಡಿನ ಜನರಿಗೆ ಬದುಕನ್ನು ನೀಡಿದೆ. ಆದರೆ ದುರಂತವೆಂದರೆ ಭಾಷೆಗಳ ಅಭಿವೃದ್ದಿಗಾಗಿ ನೀಡಿರುವ 350 ಕೋಟಿ ರೂಗಳ ಅನುದಾನದಲ್ಲಿ ಕನ್ನಡ ಭಾಷೆಗೆ ಬರೀ 2 ಕೋಟಿ ರೂಗಳನ್ನು ಮಾತ್ರ ಮೀಸಲಿಸಿರಿಸಿದೆ. ರಾಜ್ಯದಲ್ಲಿ ಸಂಸ್ಕೃತ ವಿವಿಗೆ ನೂರಾರು ಕೋಟಿ ರೂಗಳನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ದೇಶದಲ್ಲಿ 16 ಪ್ರಮುಖ ಸಂಸ್ಕೃತ ವಿಶ್ವವಿದ್ಯಾಲಯಗಳಿದ್ದು, ಕೇವಲ 24 ಸಾವಿರ ಜನ ಈ ಭಾಷೆಯನ್ನು ಮಾತನಾಡುತ್ತಿದ್ದಾರೆ. ಸಂಸ್ಕೃತ ವಿಶ್ವವಿದ್ಯಾಲಯಗಳಲ್ಲಿಯೂ ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿದೆ. ಈ ಹಿನ್ನಲೆಯಲ್ಲಿ ನಮ್ಮ ರಾಜ್ಯಕ್ಕೆ ಸಂಸ್ಕೃತ ವಿಶ್ವವಿದ್ಯಾಲಯದ ಅವಶ್ಯಕತೆಯಿಲ್ಲ. ಬದಲಾಗಿ ಕನ್ನಡ ಭಾಷೆಗೆ ಹೆಚ್ಚಿನ ಅನುದಾನ ನೀಡಿ, ಭಾಷೆಯ ಬಗ್ಗೆ ಸಂಶೋಧನೆ, ಹಾಗೂ ಅಭಿವೃದ್ಧಿಗೆ ಬಳಸಬೇಕಿದೆ. ಈ ಹಿಂದೆ ಸಂಸ್ಕೃತ ಹೇರಿಕೆಯ ವಿರುದ್ದ ಗೋಕಾಕ್ ವರದಿ ಜಾರಿಗಾಗಿಚಳವಳಿ ನಡೆದಿದ್ದು, ಅಂದಿನ ಮುಖ್ಯಮಂತ್ರಿ ಗುಂಡೂರಾವ್ ಸರ್ಕಾರದ ಅವನತಿಗೂ ಕಾರಣವಾಗಿದ್ದನ್ನು ಸ್ಮರಿಸಬಹುದಾಗಿದ್ದು, ಕನ್ನಡ ಭಾಷೆಗೆ ದಕ್ಕೆ ಬಂದರೆ ರಾಜ್ಯದಲ್ಲಿ ಮತ್ತೆ ಗೋಕಾಕ್ ವರದಿ ಜಾರಿ  ಚಳವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಸಂಸ್ಕೃತ ಭಾಷೆಯನ್ನು ಕಡೆಗಣಿಸಿ ಕನ್ನಡ ಭಾಷೆಯ ಅಸಡ್ಡೆಯನ್ನು ಎಂದೂ ಸಹಿಸುವುದಿಲ್ಲ ಎಂದರು.

Aravind, BLN Swamy, Lingapura

ಸ್ಥಳೀಯವಾಗಿ ಕೈಗಾರಿಕಾ ತ್ಯಾಜ್ಯಗಳಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಅರ್ಕಾವತಿ ನದಿ ಪಾತ್ರದ ಚಿಕ್ಕತುಮಕೂರು, ದೊಡ್ಡತುಮಕೂರು ಕೆರೆಗಳು ವೈಜ್ಞಾನಿಕವಾಗಿ ಸಂಸ್ಕರಿಸದ ನಗರಸಭೆಯ ಒಳಚರಂಡಿಯ ಹಾಗೂ ಕೈಗಾರಿಕೆಗಳ ತ್ಯಾಜ್ಯ ನೀರಿನಿಂದ ಕಲುಷಿತವಾಗುತ್ತಿವೆ. ಕೈಗಾರಿಕೆಗಳ ತ್ಯಾಜ್ಯ ನೀರು ರಾತ್ರೋರಾತ್ರಿ ಕೆರೆಗಳು, ವಿಫಲವಾಗಿರುವ ಕೊಳವೆ ಬಾವಿಗಳಿಗೆ ಸೇರುತ್ತಿವೆ.  ಈ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಲಿ ಕ್ರಮ ಕೈಗೊಳ್ಳದೇ ಇರುವುದು ತೀವ್ರ ಖಂಡನೀಯವಾಗಿದ್ದು, ಪರಿಸರ ಉಳಿವಿಗಾಗಿ ಕನ್ನಡಪರ ಸಂಘಟನೆಗಳು ಬದ್ದವಾಗಿವೆ ಎಂದರು. 

ಈ ವೇಳೆ ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯ ಪಿ.ಎ.ವೆಂಕಟೇಶ್, ಚಲವಾದಿ ಮಹಾಸಭಾದ ತಾಲೂಕು ಅಧ್ಯಕ್ಷ ಗುರುರಾಜಪ್ಪ, ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಡಿ.ವಿ.ಅಶ್ವತ್ಥಪ್ಪ, ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ನಗರ ಅಧ್ಯಕ್ಷ ಮಂಜುನಾಥ್, ತಾಲೂಕು ಕಾರ್ಯದರ್ಶಿ ನರಸಿಂಹಮೂರ್ತಿ, ಕನ್ನಡಪಕ್ಷದ ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕರವೇ ತಾಲೂಕು ಅಧ್ಯಕ್ಷ ಎಚ್.ಎಸ್ ವೆಂಕಟೇಶ್, ತಾಲೂಕು ಕಲಾವಿದರ ಸಂಘದ ಅಧ್ಯಕ್ಷ ಎನ್.ರಾಮಾಂಜಿನಪ್ಪ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಮುಖಂಡರಾದ ಮಾಳವ ನಾರಾಯಣ್, ವೆಂಕಟೇಶ್, ರಂಗಸ್ವಾಮಿ ಮೊದಲಾದವರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version