ದೊಡ್ಡಬಳ್ಳಾಪುರ: ಮಹಾಯೋಗಿ ವೇಮನ ಅವರ ಜಯಂತಿಯನ್ನು ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿಂದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ಆಚರಿಸಲಾಯಿತು.
ಕೋವಿಡ್-19 ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿ, ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ತಹಶೀಲ್ದಾರ್ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರಾದ ಮೋಹನಕುಮಾರಿ ಸೇರಿದಂತೆ ಸಮುದಾಯದ ಮುಖಂಡರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….