![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ದೊಡ್ಡಬಳ್ಳಾಪುರ: ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕಿದ್ಯಂತ “ವೈದ್ಯರ ನಡೆ ಹಳ್ಳಿಯ ಕಡೆ” ಕಾರ್ಯಕ್ರಮವನ್ನು ಜನವರಿ 20 ರಿಂದ ಪುನರಾರಂಭಿಸಲಾಗಿದ್ದು, ವೈದ್ಯಕೀಯ ತಂಡ ಆರೋಗ್ಯ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ನಗರದ ಎಪಿಎಂಸಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ವೈದರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವೈದ್ಯಕೀಯ ತಂಡ ಮನೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ, ಕೋವಿಡ್ ಸೋಂಕಿನ ಪರೀಕ್ಷೆ, ಆರೋಗ್ಯ ತಪಾಸಣೆ ಹಾಗೂ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ವೈದ್ಯಕೀಯ ತಂಡದಲ್ಲಿ ಒಬ್ಬರು ವೈದರು ಸೇರಿದಂತೆ ನರ್ಸಿಂಗ್ ಸಿಬ್ಬಂದಿ, ಲಸಿಕೆ ನೀಡುವ ಸಿಬ್ಬಂದಿ ಹಾಗೂ ಸಹಾಯಕರನ್ನು ಒಳಗೊಂಡಿದ್ದು, ತಾಲ್ಲೂಕಿಗೆ 15 ತಂಡಗಳಂತೆ ವೈದ್ಯಕೀಯ ತಂಡಗಳು ಕಾರ್ಯನಿರ್ವಹಿಸಲಿವೆ.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಮುಂದಿನ ಎರಡು ವಾರದ ಗುರಿಯೊಂದಿಗೆ ವೈದ್ಯಕೀಯ ತಂಡವು ಕಾರ್ಯನಿರ್ವಹಿಸಲಿವೆ. ತಾಲೂಕಿನಲ್ಲಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯ ಪಾತ್ರವಹಿಸಲಿವೆ ಎಂದು ತಿಳಿಸಿದರು.
ಈ ವೇಳೆ ತಹಶೀಲ್ದಾರ್ ಮೋಹನಕುಮಾರಿ, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಪೌರಾಯುಕ್ತ ರಮೇಶ್.ಎಸ್.ಸುಣಗಾರ್, ಸಿಡಿಪಿಒ ಅನಿತಾಲಕ್ಷ್ಮೀ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ್, ವೈದ್ಯಾಧಿಕಾರಿ ಡಾ.ಶ್ವೇತ ನಾಯ್ಕ್, ತಾಪಂ ಮಾಜಿ ಅಧ್ಯಕ್ಷ ನಾರಾಯಣಗೌಡ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….