Site icon ಹರಿತಲೇಖನಿ

ಇನ್ಸ್‌ಪೆಕ್ಟರ್ ಸತೀಶ್ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಭರ್ಜರಿ ಬೇಟೆ…!

Channel Gowda
Hukukudi trust

ದೊಡ್ಡಬಳ್ಳಾಪುರ: ಟಫೆ ಕಾರ್ಖಾನೆ ಬಳಿ ನಿಲ್ಲುತ್ತಿದ್ದ ಹೊರ ರಾಜ್ಯದ ಚಾಲಕರಿಗೆ ಗಾಂಜಾ ಸೋಪ್ಪು ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಹಿನ್ನಲೆ, ತೀವ್ರ ನಿಗಾವಹಿಸಿದ್ದ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸತೀಶ್ ನೇತೃತ್ವದ ಪೊಲೀಸರು ಗಾಂಜಾ ಸೊಪ್ಪುಗಳ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Aravind, BLN Swamy, Lingapura

ಹಲವು ದಿನಗಳಿಂದ ಸತತ ನಿಗಾವಹಿಸಿದ ಗ್ರಾಮಾಂತರ ಪೊಲೀಸರು ಇಂದು ಭರ್ಜರಿ ಬೇಟೆಯಾಡಿದ್ದಾರೆ.

ಬಂಧಿತರನ್ನು ಮಾರಸಂದ್ರದ ಸುರೇಂದ್ರ (35 ವರ್ಷ), ದೊಡ್ಡಬಳ್ಳಾಪುರದ ಪವನ್ ಕುಮಾರ್ (19) ವರ್ಷ ಎನ್ನಲಾಗಿದ್ದು, ಆರೋಪಿಗಳಿಂದ 3 ಕೆಜಿ 100 ಗ್ರಾಂ ಮೌಲ್ಯದ ಎ ಗ್ರೇಡ್ ಗಾಂಜಾ ಸೊಪ್ಪನ್ನು ವಶ ಪಡಿಸಿಕೊಳ್ಳಲಾಗಿದೆ.

Aravind, BLN Swamy, Lingapura

ಈ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version