ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ತೀವ್ರತರವಾಗಿ ಹರಡುತ್ತಿರುವ ಕೋವಿಡ್-19ರ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ 5 ಜನರನ್ನು ಮೀರಿ ನಡೆಸುವ ಸಭೆ-ಸಮಾರಂಭಗಳು, ಧರಣಿ, ಮುಷ್ಕರ, ರಾಜಕೀಯ, ಧಾರ್ಮಿಕ, ಕ್ರೀಡಾ ಮತ್ತಿನ್ನಿತರ ಸಮಾರಂಭಗಳನ್ನು ಆಯೋಜಿಸಲು, ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದು, ನಂತರ ಆಯಾ ತಾಲ್ಲೂಕಿನ ತಹಶೀಲ್ದಾರ್ ಅವರ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60ರ ಜೊತೆಗೆ ಭಾರತೀಯ ದಂಡ ಸಂಹಿತೆ, ಕಲಂ 188ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….