ದೊಡ್ಡಬಳ್ಳಾಪುರ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಸಮೀಪದ ಅಜ್ಜನಕಟ್ಟೆ ಬಳಿಯ ತಿರುವಿನಲ್ಲಿ ಸಂಭವಿಸಿದೆ.
ಮೃತರನ್ನು ಕೆಸ್ತೂರು ಗ್ರಾಮದ ಪ್ರಸನ್ನಚಾರ್(45ವರ್ಷ) ಎಂದು ಗುರುತಿಸಲಾಗಿದೆ.
ದೊಡ್ಡಬೆಳವಂಗಲದಿಂದ ದೊಡ್ಡಬಳ್ಳಾಪುರದ ಕಡೆಗೆ ಬರುತ್ತಿದ್ದ ಪ್ರಸನ್ನಚಾರ್ ದ್ವಿಚಕ್ರ ವಾಹನ ಹಾಗೂ ದೊಡ್ಡಬಳ್ಳಾಪುರದಿಂದ ದಾಸ್ ಪೇಟೆ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಅಪಘಾತ ನಡೆದು ಈ ದುರ್ಘಟನೆ ಸಂಭವಿಸಿದೆ.
ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….