Site icon ಹರಿತಲೇಖನಿ

ಪೊಲೀಸ್ ವ್ಯವಸ್ಥೆಯನ್ನು ಗೌರವಿಸುವಂತಾಗಬೇಕು: ಗೃಹ ಸಚಿವ ಅರಗ ಜ್ಞಾನೆಂದ್ರ

Channel Gowda
Hukukudi trust

ಚಿಕ್ಕಬಳ್ಳಾಪುರ: ಸಮಾಜ ನಮ್ಮ ಪೊಲೀಸ್ ವ್ಯವಸ್ಥೆ ಮತ್ತು  ನಮ್ಮ ಠಾಣೆಗಳನ್ನು ಗೌರವಿಸಿ ಭಾವಿಸುವ ರೀತಿಯಲ್ಲಿ ಜನಸ್ನೇಹಿಯಾಗಿ  ಕಾರ್ಯನಿರ್ವಹಿಸಬೇಕು ಎಂದು ಗೃಹಸಚಿವರಾದ ಅರಗ ಜ್ಞಾನೇಂದ್ರ ಅವರು ತಿಳಿಸಿದರು.

Aravind, BLN Swamy, Lingapura

ಅವರು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಗೃಹ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ  ಹಾಗೂ ಜಿಲ್ಲೆಯಲ್ಲಿನ ಪೊಲೀಸ್ ವ್ಯವಸ್ಥೆಯ ಕಾರ್ಯವೈಖರಿಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದು ಚರ್ಚಿಸಿದರು.

ಈ ವೇಳೆ ಮಾತನಾಡುತ್ತಾ, ಜಿಲ್ಲಾ ಪೊಲೀಸ್ ಇಲಾಖೆಯು ಸಮುದಾಯ ಪೋಲಿಸ್ ಕಾರ್ಯಕ್ರಮಗಳನ್ನು ಹಾಗೂ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಮಾಡುತ್ತಾ ಇದೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಬೀಟ್ ವ್ಯವಸ್ಥೆಯನ್ನು ಬಲವರ್ಧನೆ ಮಾಡಬೇಕು ಉತ್ತಮವಾಗಿ ಬೀಟ್ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಸನ್ಮಾನಿಸಿ ಗೌರವಿಸಬೇಕು. ಪೋಲಿಸ ಪೇದೆಗಳು  ಯಾಂತ್ರಿಕವಾಗಿ ಕೆಲಸ ಮಾಡದೆ ತಮ್ಮ ಹೊಣೆಗಾರಿಕೆಯನ್ನು ಅರಿತುಕೊಂಡು ಕೆಲಸ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಕಾನೂನುಬಾಹಿರ ಕ್ರಮಗಳೆಲ್ಲವನ್ನು ಮಟ್ಟಹಾಕಬೇಕು ಎಂದು  ಸೂಚಿಸಿದರು. 

Aravind, BLN Swamy, Lingapura

ಪೊಲೀಸ್ ವ್ಯವಸ್ಥೆಯನ್ನು ಬಲವರ್ಧನೆ ಮಾಡುವ ಕುರಿತು ಅಗತ್ಯ ಸಲಹೆ ಸೂಚನೆಗಳನ್ನು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನೀಡಿದರು ಮತ್ತು ಜಿಲ್ಲೆಯಲ್ಲಿ  ಅತ್ಯುತ್ತಮ ಸೇವೆಗೈದ 11 ಪೋಲಿಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರಶಸ್ತಿ ಪತ್ರಗಳನ್ನು  ನೀಡಿ ಗೌರವಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ  ಮಿಥುನ್ ಕುಮಾರ್ ಅವರು ಜಿಲ್ಲಾ ಪೊಲೀಸ್  ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆ ಸಮಗ್ರವಾಗಿ ಪಿ.ಪಿ.ಟಿ ಮುಖಾಂತರ ಸಚಿವರಿಗೆ ಮಾಹಿತಿ ಒದಗಿಸಿದರು. 

ಈ ವೇಳೆ ಕೇಂದ್ರ ವಲಯ ಐ.ಜಿ.ಪಿ ಚಂದ್ರಶೇಖರ್ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

 ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯದಲ್ಲಿ ಶೇ.49 ರಷ್ಟು ಪೊಲೀಸ್ ಸಿಬ್ಬಂದಿಗೆ ಮಾತ್ರ ವಸತಿ ಗೃಹಗಳಿದ್ದು, ಉಳಿದ ಸಿಬ್ಬಂದಿಗೆ ವಸತಿ ಗೃಹಗಳ ಸೌಕರ್ಯ ಒದಗಿಸಲು ರಾಜ್ಯ ಸರ್ಕಾರ  ಈ ಸಾಲಿನಿಂದ ಗೃಹಭಾಗ್ಯ  ಯೋಜನೆಯಡಿ 2 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 10 ಸಾವಿರ ಮನೆಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಕಳೆದ ಮೂರು ದಿನಗಳ ಹಿಂದೆ 300 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದ  ಆಂತರಿಕ ಭದ್ರತೆ ಕಾಪಾಡುತ್ತಿರುವ ಪೊಲೀಸರಿಗೆ ಅಗತ್ಯ ವೇತನ  ಹಾಗೂ  ಇನ್ನಿತರ  ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಈಗಾಗಲೇ ಎರಡು ಬೆಡ್ ರೂಮ್ ಗಳ 11 ಸಾವಿರ ಮನೆಗಳನ್ನು ನಿರ್ಮಿಸಿಕೊಡಲಾಗಿದ್ದು, ಪ್ರಸ್ತುತ ರಾಜ್ಯದಲ್ಲಿ ಶೇ.49 ರಷ್ಟು ಪೊಲೀಸ್ ಸಿಬ್ಬಂದಿಗೆ ಮಾತ್ರ ವಸತಿ ಗೃಹದ ಸೌಲಭ್ಯವಿದೆ. ಉಳಿದ ಸಿಬ್ಬಂದಿಗೂ ವಸತಿಗೃಹಗಳನ್ನು ಒದಗಿಸಲು ಸರ್ಕಾರ ಕಾರ್ಯೋನ್ಮುಖವಾಗಿದ್ದು, ಗೃಹಭಾಗ್ಯ  ಯೋಜನೆಯಡಿ ಈ ಸಾಲಿನಿಂದ  2 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ

ಒಟ್ಟು 10 ಸಾವಿರ ವಸತಿ ಗೃಹಗಳನ್ನು ನಿರ್ಮಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮೊದಲ ಹಂತವಾಗಿ ಕಳೆದ ಮೂರುದಿನಗಳ ಹಿಂದೆ 300 ಕೋಟಿ ರೂಪಾಯಿಗಳನ್ನೂ ಬಿಡುಗಡೆ ಮಾಡಲಾಗಿದೆ. ವಸತಿಗೃಹಗಳ ಕಾಮಗಾರಿ ಪೂರ್ಣಗೊಂಡ ನಂತರ ಉಳಿದ ಸಿಬ್ಬಂದಿಗೆ ಅನುಕೂಲವಾಗಲಿದೆ. ಈ  ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ.

ರಾಜ್ಯದಲ್ಲಿ 100 ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡಗಳನ್ನು  200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು. 

ಚಿಕ್ಕಬಳ್ಳಾಪುರ ಜಿಲ್ಲೆಯು ಆಂಧ್ರದ ಗಡಿಭಾಗದಲ್ಲಿದ್ದು, ಜೂಜು ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳು ಜಿಲ್ಲೆಯೊಳಕ್ಕೆ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವ್ಯವಸ್ಥೆ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ.ರಾಜ್ಯದಲ್ಲಿ ಪೊಲೀಸರ ಸಮವಸ್ತ್ರವನ್ನು ಮತ್ತಷ್ಟು ಆಧುನಿಕವಾಗಿಸುವ ಚಿಂತನೆಯೂ ಇಲಾಖೆಯಲ್ಲಿದೆ.

ವಾರಾಂತ್ಯದ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಆದರೆ, ಅದರ ಹಿಂದೆ ಸಾರ್ವಜನಿಕರ ಹೊಣೆಗಾರಿಕೆಯೂ ಇದೆ ಎಂದು ಸರ್ಕಾರ ಭಾವಿಸಿದೆ ಎಂದರು.

ಸಣ್ಣಪುಟ್ಟ ವ್ಯಾಪಾರಿಗಳು, ಬೀದಿ ವ್ಯಾಪಾರಿಗಳ ಜೀವನಕ್ಕೆ ತೊಂದರೆಯಾಗಬಾರದೆಂಬ ಉದ್ದೇಶದಿಂದಷ್ಟೇ ವಾರಾಂತ್ಯದ ಕರ್ಫ್ಯೂ ವಾಪಸ್ ಪಡೆದಿದ್ದು, ಆದರೆ, ರಾತ್ರಿ ಕರ್ಫ್ಯೂವನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು. ಜನರು ಹೊಣೆಗಾರಿಕೆ ಮರೆಯಬಾರದು ಎಂದು ತಿಳಿಸಿದರು. 

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ ಗಂಭೀರ ಅಪರಾಧ ಪ್ರಕರಣಗಳು ವರದಿಯಾಗಿಲ್ಲ ಎಂದು ಇದೇ ವೇಳೆ ಜಿಲ್ಲಾ ಪೊಲೀಸ್ ವ್ಯವಸ್ಥೆಯನ್ನು ಅಭಿನಂದಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version