ಬೆಂ.ಗ್ರಾ.ಜಿಲ್ಲೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಮತ್ತು ಕೋವಿಡ್ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಜನವರಿ 26 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜನವರಿ 26 ರಂದು ಬೆಳಿಗ್ಗೆ 9.00 ಗಂಟೆಗೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿರುವ “73ನೇ ಗಣರಾಜ್ಯೋತ್ಸವ ದಿನಾಚರಣೆ” ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11.30 ಗಂಟೆಗೆ ದೇವನಹಳ್ಳಿಯಿಂದ ರಸ್ತೆ ಮೂಲಕ ಸಚಿವರು ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಸೂರಜ್ ಎ.ಆರ್.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….