ಬೆಂ.ಗ್ರಾ.ಜಿಲ್ಲೆ: ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಏರ್ಪಡಿಸಲಾದ “73ನೇ ಗಣರಾಜ್ಯೋತ್ಸವ” ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಕೆ. ಸುಧಾಕರ್ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ರವಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್, ದೇವನಹಳ್ಳಿ ಪುರಸಭೆಯ ಅಧ್ಯಕ್ಷರಾದ ಜಿ.ರೇಖಾ, ಉಪಾಧ್ಯಕ್ಷರಾದ ಪುಷ್ಪಲತಾ ಕೆ.ಆರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣಪ್ಪ.ಕೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೋನ ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ, ದೇವನಹಳ್ಳಿ ತಹಶೀಲ್ದಾರ್ ಅನಿಲ್ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….