ಬೆಂ.ಗ್ರಾ. ಜಿಲ್ಲೆ: “73ನೇ ಗಣರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಗಂಗಮಾರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ. ಬಿ.ಆರಾಧ್ಯ, ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಾಜಸುಲೋಚನ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….